ಮುಂಬೈ:ದೇಶದ ಶ್ರೀಮಂತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಚೇರ್ಮನ್ ಮುಖೇಶ್ ಅಂಬಾನಿ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ತೆಲಂಗಾಣದ 19 ವರ್ಷದ ಯುವಕನನ್ನು ಶನಿವಾರ ಬಂಧಿಸಲಾಗಿದೆ.
ಇದನ್ನೂ ಓದಿ:ಮುಖೇಶ್ ಅಂಬಾನಿ ಅವರಿಗೆ ಕಳೆದ ವಾರ ಇ-ಮೇಲ್ ಮೂಲಕ ಮೂರು ಬೆದರಿಕೆ ಬಂದಿದ್ದು, ಪ್ರತಿಯೊಂದೂ ಭಾರಿ ಮೊತ್ತದ ಹಣಕ್ಕೆ ಬೇಡಿಕೆಯಿಡಲಾಗಿತ್ತು.ಆರೋಪಿಯನ್ನು ಗಣೇಶ್ ರಮೇಶ್ ವನಪರ್ಡಿ ಎಂದು ಗುರುತಿಸಲಾಗಿದ್ದು, ನವೆಂಬರ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. ಮೊತ್ತಕ್ಕೆ ಒತ್ತಾಯಿಸಿ ಮೊದಲ ಇ-ಮೇಲ್ ಬಂದಿತ್ತು. ಹಣ ಪಾವತಿಸಬೇಕು, ಇಲ್ಲವಾದರೆ ಕೊಲ್ಲಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ನಂತರ ಮುಖೇಶ್​ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಅಕ್ಟೋಬರ್ 27 ರಂದು ಮುಂಬೈನಲ್ಲಿ ದೂರು ದಾಖಲಿಸಲಾಗಿದೆ.
2ದಿನಗಳ ನಂತರ 200 ಕೋಟಿ ರೂ.ಗೆ ಬೇಡಿಕೆಯ ಮತ್ತೊಂದು ಇ-ಮೇಲ್ ಕಂಪನಿಗೆ ಬಂದಿತ್ತು. ಶನಿವಾರ ಮೂರನೇ ಬಾರಿಗೆ 400 ಕೋಟಿ ನೀಡದಿದ್ದರೆ ಅಂಬಾನಿ ಅವರನ್ನು ಸಾಯಿಸುವುದಾಗಿ ಬೆದರಿಕೆ ಹಾಕಲಾಗಿತ್ತು.
ಈ ಮೇಲ್ ಐಡಿ ಶಾದಾಬ್ ಖಾನ್ ಎಂಬ ವ್ಯಕ್ತಿಗೆ ಸೇರಿದ್ದು, ಬೆಲ್ಜಿಯಂನಿಂದ ಮೇಲ್‌ಗಳು ಬಂದಿವೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.ಇದು ವ್ಯಕ್ತಿಯ ಸರಿಯಾದ ಐಡಿಯೇ ಅಥವಾ ನಕಲಿ ಐಡಿ ಬಳಸಿ ಈ ಮೇಲ್‌ಗಳನ್ನು ಕಳುಹಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಒಂದೇ ಕೋಣೆಯಲ್ಲಿ ಕ್ರಿಕೆಟಿಗ ಚಾಹಲ್ ಪತ್ನಿ ಧನಶ್ರೀ- ಶ್ರೇಯಸ್ ಅಯ್ಯರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
