ಮುಂಬೈ:ಅನೇಕ ವರ್ಷಗಳ ಕಾಲ ದಾಂಪತ್ಯ ಜೀವನವನ್ನು ಜತೆಯಾಗಿ ನಡೆಸಿ ವಯಸ್ಸಾದ ಮೇಲೆ ಪತಿ/ಪತ್ನಿ ಮೇಲೆ ಅನುಮಾನ ಪಡುವುದು ಎಂದರೇನು ಅರ್ಥ? ಹೌದು ಇಂತಹ ವಿಚಿತ್ರ ಘಟನೆಯೂ ನಡೆದಿದೆ! ಈ ಘಟನೆ ನಡೆದದ್ದು ಮುಂಬೈನ ಸಿಯಾನ್​ ಎಂಬ ಉಪನಗರದಲ್ಲಿ.
ಈ ಭೂಪ ಮುಂಬೈನ ಉಪನಗರ ಸಿಯಾನ್‌ನಲ್ಲಿ 69 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಆಕೆಯ ಮೇಲೆ ಆಸಿಡ್ ಎರಚಿರುವ ಬಗ್ಗೆ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ. ಸೋಮವಾರ ಮುಂಜಾನೆ ಪ್ರತೀಕ್ಷಾನಗರದಲ್ಲಿರುವ ಅವರ ನಿವಾಸದಲ್ಲಿ ನಡೆದ ದಾಳಿಯಲ್ಲಿ 56 ವರ್ಷದ ಮಹಿಳೆ ಮೇಲೆ ಆ್ಯಸಿಡ್​ ದಾಳಿ ಆಗಿದ್ದು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯು ತನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿದ್ದು ಮಧ್ಯರಾತ್ರಿ 1.30 ರ ಸುಮಾರಿಗೆ ದಂಪತಿಗಳು ಜಗಳವಾಡಿದ್ದಾರೆ ಎಂದು ಪೊಲೀಸರು ಹೇಳಿದರು. ಕೋಪದ ಭರದಲ್ಲಿ, ಆರೋಪಿಯು ಆ್ಯಸಿಡ್ ಬಾಟಲಿಯನ್ನು ಹಿಡಿದು ತನ್ನ ಹೆಂಡತಿಯ ಮುಖದ ಮೇಲೆ ಎಸೆದು ಗಾಯಗೊಳಿಸಿದನು ಎಂದು ಅಧಿಕಾರಿ ಹೇಳಿದರು. ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
