ಲಖನೌ:ಆವಸರವೇ ಅಪಘಾತಕ್ಕೆ ಕಾರಣ ಎಂಬ ಪ್ರಸಿದ್ಧ ನಾಣುಡಿಯನ್ನು ಕೇಳಿದ್ದೇವೆ. ಕೆಲವೊಮ್ಮೆ ನಾವು ಸಮಯಕ್ಕೆ ಸರಿಯಾಗಿ ತೆರಳಬೇಕೆಂಬ ನಿಟ್ಟಿನಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ಪಾಲಿಗೆ ಮುಳುವಾಗಲಿದೆ. ಇದೀಗ ಅದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅವಸರವೇ ಇದಕ್ಕೆಲ್ಲಾ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಘಟನೆ ಸಂಬಂಧ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
रेल फाटक बंद था। साइकिल निकाल लेते तो शायद ऑस्कर मिलता। लेकिन दुखद, ट्रेन की चपेट में आ गए। Video उत्तर प्रदेश में कानपुर की है।pic.twitter.com/oKGhm9Ix7o
ಇದನ್ನೂ ಓದಿ:ಒಂದೇ ಕೈಯಲ್ಲಿ ಅದ್ಭುತವಾಗಿ ಫ್ಲೈಯಿಂಗ್ ಕ್ಯಾಚ್ ಹಿಡಿದ ಆಟಗಾರ; ವಿಡಿಯೋ ವೈರಲ್
ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ರೈಲು ಬರುವುದನ್ನು ಗಮನಿಸಿ ತಮ್ಮ ಸೈಕಲ್​ನೊಂದಿಗೆ ಹಳಿ ದಾಟುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ವೇಗವಾಗಿ ಬಂದ ರೈಲು ಹಳಿ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಮತ್ತು ಆತನ ಜೊತೆಗಿದ್ದ ಸೈಕಲ್​ ನಜ್ಜುಗುಜ್ಜಾಗಿದೆ.
ಘಟನೆ ನಡೆದ ಬಳಿಕ ಕೆಲಕಾಲ ವಾಹನ ಹಾಗೂ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಸಮಯ ಉಳಿಸಲು ಹೋಗಿ ವ್ಯಕ್ತಿಯೊಬ್ಬರು ತಮ್ಮ ಜೀವವನ್ನು ಕಳೆದುಕೊಂಡಿರುವುದು ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ರೈಲ್ವೇ ನಿಲ್ದಾಣ ಹಾಗೂ ಕ್ರಾಸಿಂಗ್​ನಲ್ಲಿ ಸೆಕ್ಯೂರಿಟಿಗಳನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು ಈ ರೀತಿಯ ಘಟನೆಗಳು ಮರುಕಳಿಸದಂತೆ ಮುಂಜಾಗ್ರತ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 8 =
Remember me
