ಜೈಪುರ:ಮಾವಿನ ಕಾಯಿ ಕೀಳುತ್ತಿದ್ದ ಎಂಬ ಆರೋಪದ ಮೇಲೆ ವ್ಯಕ್ತಿ ಒಬ್ಬನನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಸೂರಜ್​ ಕರಣ್​ ಮೀನಾ ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಘಟನೆ ಸಂಬಂಧ 5 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರತ್ಯಕ್ಷದರ್ಶಿ ಮಹಾವೀರ್​ ಮಾವಿನ ಕಾಯಿ ಕೀಳುತ್ತಿದ್ದ ಎಂವ ಕಾರಣಕ್ಕೆ ಅವನ ಮೇಲೆ ಅಮಾನುಷವಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದರು.
ನಂದಲಾಲ್​ ಬೈರ್ಯ ಎಂಬುವವರ ಜಮೀನಲ್ಲಿ ಇದ್ದ ಮಾವಿನ ಮರದಿಂದ ಹಣ್ಣನ್ನು ಕೀಳಲು ಯತ್ನಿಸಿದ್ದಾರೆ. ಈ ವೇಳೆ ಆಗಮಿಸಿದ ಬೈರ್ಯ ಹಾಗೂ ಮೀನಾ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.
ಇದನ್ನೂ ಓದಿ:ಸೈಕ್ಲೋನ್​ ಎಫೆಕ್ಟ್​ನಿಂದ ರಾಜ್ಯದಲ್ಲಿ ಮೇ 8ರಿಂದ ಮಳೆ ಚುರುಕು
ಈ ವೇಳೆ ನಂದಲಾಲ್​ ತನ್ನ ಸಂಬಂಧಿಕರನ್ನು ಕರೆಸಿಕೊಂಡು ಮೀನಾರನ್ನು ಬೈಕಿನಲ್ಲಿ ರೊಲಾನ ಗ್ರಾಮಕ್ಕೆ ಕರೆದೊಯ್ದು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಘಟನೆ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮಹಾವೀರ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
