ನವದೆಹಲಿ:ಜೀವಕ್ಕೆ ಕಂಟಕ ಬರುವಂಥ ಸಂದರ್ಭ-ಸೂಚನೆಗಳಿದ್ದಾಗ ಮೃತ್ಯುಂಜಯ ಹೋಮ-ಜಪ ಮಾಡಿಸುವುದು ಸಾಮಾನ್ಯ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ, ಈ ಜಾಗದಲ್ಲಿ ಯಾರೂ ಸಾವಿಗೀಡಾಗದಿರಲಿ ಎಂದು ಜನರನ್ನು ಸೇರಿಸಿ ಮೃತ್ಯುಂಜಯ ಜಪ ಮಾಡಿಸಿದ್ದಕ್ಕೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್​ಪ್ರೆಸ್​ವೇನಲ್ಲಿ ಜು. 1ರಂದು ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 25 ಮಂದಿ ಸತ್ತು ಸುಟ್ಟು ಕರಕಲಾಗಿದ್ದರು. ಅಲ್ಲದೆ ಕಳೆದ 6 ತಿಂಗಳಲ್ಲಿ ಈ ಪ್ರದೇಶದಲ್ಲಿ 80ಕ್ಕೂ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಈ ಹಿನ್ನೆಲೆಯಲ್ಲಿ ಬುಲ್ದಾನದ ನೀಲೇಶ್ ಅಧವ್ ಎಂಬ ವ್ಯಕ್ತಿ ಜುಲೈ 23ರಂದು ಈ ಪ್ರದೇಶದಲ್ಲಿ ಮೃತ್ಯುಂಜಯ ಯಂತ್ರ ಅಳವಡಿಸಿ, ಜನರನ್ನು ಸೇರಿಸಿ ಮೃತ್ಯುಂಜಯ ಜಪ ಮಾಡಿಸಿದ್ದ. ಇದನ್ನು ವಿರೋಧಿಸಿ ಅಂಧಶ್ರದ್ಧಾ ನಿರ್ಮೂಲನಾ ಸಮಿತಿಯ ಹಮಿದ್ ದಾಭೋಲ್ಕರ್ ಎಂಬಾತ ಪೊಲೀಸರಿಗೆ ದೂರು ನೀಡಿದ್ದ. ಆದ್ದರಿಂದ ಮಹಾರಾಷ್ಟ್ರ ಪೊಲೀಸರು ಅಧವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಮೃತ್ಯುಂಜಯ ಯಂತ್ರ ಅಳವಡಿಸಿದ ಜಾಗದಿಂದ ಐದು ಕಿ.ಮೀ. ವ್ಯಾಪ್ತಿಯಲ್ಲಿ ಇನ್ನು ಅಪಘಾತ ಸಂಭವಿಸುವುದಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡು ಜನರನ್ನು ದಾರಿ ತಪ್ಪಿಸಿರುವ ಹಿನ್ನೆಲೆಯಲ್ಲಿ ಅಧವ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್​ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
