ನವದೆಹಲಿ:ವಿಲಕ್ಷಣಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರಜೌರಿ ಗಾರ್ಡನ್​ ಪೊಲೀಸ್​ ಠಾಣೆ​ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿ ಪವನ್​ ಮಲ್ಹೋತ್ರಾ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು, ಈತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹಲವರು ಆಗ್ರಹಿಸಿದ್ಧಾರೆ.
ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಪವನ್​ ಮಲ್ಹೋತ್ರಾ ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಈತ ಅವರ ಮೇಲೂ ಹಲ್ಲೆ ನಡೆಸಿ ಅಮಾನವೀಯವಾಗಿ ನಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC Section) 377ರ ಅಡಿ ಪ್ರಕರಣ ದಾಖಲಾಗಿದೆ.
"स्ट्रीट डॉग्स के खिलाफ आंदोलन करने वाला तथाकथित समाजसेवी संस्था का सेकेट्री स्ट्रीट डॉग्स के साथ अप्राकृतिक संबंध बनाते पाया गया FIR रजिस्टर वीडियो वायरल" Subhash nagar block 6/105 abto kutte ne kaata nahi@VijayGoelBJPji dekhe 👇pic.twitter.com/M9EXLsFvOa
ಇದನ್ನು ಓದಿ:ಜೀಪ್​-ಲಾರಿ ನಡುವೆ ಡಿಕ್ಕಿ; ಕರ್ನಾಟಕ ಮೂಲದ ಐವರು ಮೃತ್ಯು, 11ಮಂದಿ ಗಂಭೀರ
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಣಿ ದಯಾ ಸಂಘದ ಸದಸ್ಯರಾದ ಗರಿಮಾ ಬಜಾಜ್​ ಈತ 2019ರಿಂದಲೂ ಈ ರೀತಿಯ ಕೃತ್ಯ ಎಸಗುತ್ತಿದ್ದಾನೆ. ಅವರ ಕುಟುಂಬದವರು ಹಾಗೂ ನೆರೆಹೊರೆಯವರಿಗೂ ಈ ವಿಚಾರ ತಿಳಿದಿದ್ದು, ಯಾರೂ ಸಹ ದೂರು ಕೊಡಲು ಮುಂದೆ ಬಂದಿಲ್ಲ. ಕೃತ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ ವ್ಯಕ್ತಿಯ ಮೇಲೆ ಆರೋಪಿ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಚಾರವನ್ನು ಪ್ರಾಣಿ ದಯಾ ಸಂಘ ಹಾಗೂ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ದೂರುದಾರೆ ಗರಿಮಾ ಬಜಾಜ್​ ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ರಜೌರಿ ಗಾರ್ಡನ್​ ಪೊಲೀಸ್​ ಠಾಣೆಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಕೃತ್ಯ ಎಸಗಿದ ಆರೋಪಿ ತಲೆಮಾರಿಸಿಕೊಂಡಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಈ ರೀತಿಯ ಅಮಾನವೀಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
