ನವದೆಹಲಿ:ಇತ್ತೀಚಿನ ದಿನಗಳಲ್ಲಿ ರಾಷ್ಟ್ರರಾಜಧಾನಿ ನವದೆಹಲಿಯ ಜೀವನಾಡಿ ಎಂದೇ ಖ್ಯಾತಿ ಪಡೆದಿರುವ ಮೆಟ್ರೋ ರೈಲು ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಸದಾ ಚರ್ಚೆಗೆ ಗ್ರಾಸವಾಗಿರುತ್ತದೆ. ಇದೀಗ ಹಳಿ ದಾಟಲು ಹೋಗಿ ವ್ಯಕ್ತಿಯೊಬ್ಬರು ರೈಲಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಯೆಲ್ಲೋ ಲೇನ್​ನಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಮೃತರನ್ನು ಉತ್ತರಪ್ರದೇಶದ ಕಾನ್ಪುರ ಮೂಲದ ಬುರಾ ಸಿಂಗ್​ (40) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ; ರಕ್ಷಣಾ ತಂಡ, ಕಾರ್ಮಿಕರನ್ನು ಶ್ಲಾಘಿಸಿದ ಪ್ರಧಾನಿ
ಈ ಕುರಿತು ಪ್ರತಿಕ್ರಿಯಿಸಿರುವ DMRCಯ ಹಿರಿಯ ಅಧಿಕಾರಿಯೊಬ್ಬರು, ಬುರಾ ಸಿಂಗ್ ಛತ್ತರ್​ಪುರ ಮೆಟ್ರೋ ಸ್ಟೇಷನ್​ನಲ್ಲಿ ಇಳಿದ ಬಳಿಕ ಮತ್ತೊಂದು ರೈಲನ್ನು ಹತ್ತಬೇಕಿತ್ತು. ತಡವಾಗಿದರಿಂದ ಆತ ಆತುರದಲ್ಲಿ ಹಳಿಯನ್ನು ದಾಟಲು ಮುಂದಾಗಿದ್ದಾನೆ. ಈ ವೇಳೆ ಎದುರಿನಿಂದ ಬಂದ ರೈಲು ಆತನಿಗೆ ಗುದಿದ್ದು, ಪ್ಲಾಟ್​ಫಾರ್ಮ್​ ಹಾಗೂ ರೈಲಿನ ನಡುವೆ ಸಿಲುಕಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಮಯ ಉಳಿಸಲು ಹೋಗಿ ವ್ಯಕ್ತಿಯೊಬ್ಬರು ತಮ್ಮ ಜೀವವನ್ನು ಕಳೆದುಕೊಂಡಿರುವುದು ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಮೆಟ್ರೋ ನಿಲ್ದಾಣಗಳಲ್ಲಿ ಸೆಕ್ಯೂರಿಟಿಗಳನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು ಈ ರೀತಿಯ ಘಟನೆಗಳು ಮರುಕಳಿಸದಂತೆ ಮುಂಜಾಗ್ರತ ಕ್ರಮ ವಹಿಸಲಾಗುವುದು ಎಂದು DMRCಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 4 =
Remember me
