ಲಖನೌ:ಕುಟುಂಬದ ಇಷ್ಟಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕಾಗಿ ವ್ಯಕ್ತಿಯೋರ್ವ ತನ್ನ ಸಹೋದರಿಯ ತಲೆ ಕಡಿದು ಅದನ್ನು ಹಿಡಿದುಕೊಂಡು ತಿರುಗಾಡಿರುವ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಮೊಹಮ್ಮದ್​ ರಿಯಾಜ್​(24) ಎಂದು ಗುರುತಿಸಲಾಗಿದ್ದು, ಕುಟುಂಬದ ಇಷ್ಟಕ್ಕೆ ವಿರುದ್ಧವಾಗಿ ನಡೆದುಕೊಂಡಿದಕ್ಕಾಗಿ ಸಹೋದರಿಯ ತಲೆಯನ್ನು ಕಡಿದು ದ್ವೇಷವನ್ನು ತೀರಿಸಿಕೊಂಡಿದ್ದಾನೆ.
ಇದನ್ನೂ ಓದಿ:ಸೂಚನೆ ನೀಡಿ ತಡೆದರೂ ನಮ್ಮ ಮೇಲೆಯೇ ಕೇಸ್: ಭಜರಂಗದಳ ಆಕ್ರೋಶ
ಆರೋಪಿ ಮೊಹಮ್ಮದ್​ ರಿಯಾಜ್​ ಸಹೋದರಿ ಅನ್ಯ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರವನ್ನು ತಿಳಿದು ಕುಟುಂಬಸ್ಥರು ವಿರೋಧಿಸಿದ್ದರು ಮತ್ತು ಯುವಕನಿಂದ ದೂರ ಉಳಿಯುವಂತೆ ಸೂಚಿಸಿದ್ದರು. ಇದರ ಹೊರತಾಗಿಯೂ ಯುವತಿ ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಳು.
ಇದರಿಂದ ಕುಪಿತಗೊಂಡ ಆರೋಪಿಯು ತನ್ನ ಸಹೋದರಿಯ ತಲೆಯನ್ನು ಮನೆ ಮುಂದೆಯೇ ಕಡಿದು ಅದನ್ನು ಹಿಡಿದು ನೆರೆ ಹೊರೆ ಪ್ರದೇಶದಲ್ಲಿ ತಿರುಗಾಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ FIR ಹಾಕಿದ್ದಾರೆ.
ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಕುಟುಂಬಸ್ಥರ ಹೇಳಿಕೆಯನ್ನು ಪಡೆದು ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದಾರೆ.
थाना फतेहपुर क्षेत्रान्तर्गत ग्राम मिठवारा में सगे भाई द्वारा बहन की गर्दन काट कर हत्या कर देने के सम्बन्ध में अपर पुलिस अधीक्षक, उत्तरी की बाइट-#UPPolice#barabankipolice@Uppolice@adgzonelucknow@igrangeayodhyapic.twitter.com/3wejroxov5
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × five =
Remember me
