ಛತ್ತೀಸ್‌ಗಢ:ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸೋದರ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಸಲಿಂಗ ವಿವಾಹಕ್ಕೆ ಕಾನೂನು ರಕ್ಷಣೆ ನೀಡಿದರೆ ಭಾರತೀಯ ಜೀವನಶೈಲಿ ತಲೆಕೆಳಗೆ ಆಗಬಹುದು: ಸುಪ್ರೀಂಕೋರ್ಟ್​ಗೆ ಪತ್ರ ಬರೆದ RSS ಅಂಗಸಂಸ್ಥೆ
ದಿಲೀಪ್ ರೌಜ್ಕರ್ ಮೃತ. ಈತ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದರು. ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು. ಮದುವೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.
ವಿಡಿಯೋದಲ್ಲಿ ಏನಿದೆ?:ಮೇ 4 ಮತ್ತು 5 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದನು. ನೃತ್ಯ ಮಾಡುತ್ತಾ ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಂತರ ಅಲ್ಲಿರುವವರು ಗಮನಿಸಿ ನೋಡಿದ್ದಾರೆ. ಅಷ್ಟರಲ್ಲಾಗಲೇ ಆತನ ಪ್ರಾಣಪಕ್ಷಿ ಹಾರಿ ಹೋಗಿದೆ. ಇಡೀ ಘಟನೆಯ ವಿಡಿಯೋ ಕ್ಯಾಮರಾದಲ್ಲಿ ಸೆರೆಯಾಗಿದೆ.
10 May 2023 : 🇮🇳 : Dilip Rautkar, an engineer at Bhilai Steel Plant, suffered a 💔attack💉 while dancing at a wedding & died on the spot.#heartattack2023#TsunamiOfDeath#BeastShotStrikesAgain#BeastShotpic.twitter.com/PLogsrUAx7
— Anand Panna (@AnandPanna1)May 10, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 17 =
Remember me
