ಉತ್ತರ ಪ್ರದೇಶ:ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್​ ಮಾಡಿ, ಹೆಚ್ಚಿನ ಲೈಕ್ಸ್ ಪಡೆಯುವ ಸಲುವಾಗಿ ಶಾಲಾ ಕಟ್ಟದ ಮೇಲೆ ತಲೆಕೆಳಗಾಗಿ ನಿಂತು ಕಸರತ್ತು ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆ ಕಟ್ಟಡದ ಮೇಲಿದ್ದ ಚಪ್ಪಡಿ ಕಲ್ಲು ಉರುಳಿ ಬಿದಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾಂದ್ರಾ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ದಿನದ 24 ಗಂಟೆಯೂ ಮೋದಿ ಜಪ ಮಾಡುವುದೇ ಕೆಲಸ!
ರೀಲ್ಸ್​ ಚಿತ್ರೀಕರಣ ಮಾಡುತ್ತಿದ್ದಾಗ ಆತನ ಮೇಲೆ ಚಪ್ಪಡಿ ಬಿದ್ದ ಪರಿಣಾಮ ಕೆಲ ಸಮಯ ಯುವಕ ನರಳಾಡಿ ಪ್ರಾಣಬಿಟ್ಟಿದ್ದಾನೆ ಎಂದು ವರದಿ ಉಲ್ಲೇಖಿಸಿದೆ. ವಿಡಿಯೋ ಮಾಡುವಾಗ ಸ್ಲ್ಯಾಬ್‌ನ ಮಧ್ಯೆ ಆತನ ಕಾಲುಗಳು ಸಿಕ್ಕಿಹಾಕಿಕೊಂಡಿದೆ. ಆ ವೇಳೆ ಕಲ್ಲು ಬಿದ್ದು ಸಾವನ್ನಪ್ಪಿದ್ದಾನೆ. ಶಾಲೆಯ ಟೆರೇಸ್‌ನಿಂದ ತಲೆಕೆಳಗಾಗಿ ನೇತಾಡುತ್ತಿದ್ದ 21 ವರ್ಷದ ಯುವಕನನ್ನು ಶಿವಂ ಎಂದು ಗುರುತಿಸಲಾಗಿದೆ.
ಯುವಕನ ಸಾವಿನ ಸುದ್ದಿ ತಿಳಿದ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಊರಿನ ಮಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಪ್ರಕರಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ,(ಏಜೆನ್ಸೀಸ್).
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 12 =
Remember me
