ಮುರ್ಷಿದಾಬಾದ್:ಬಾಂಬ್​ ಇಡಲು ಬಂದ ವ್ಯಕ್ತಿ ತಾನೇ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮಧ್ಯಂಪುರದಲ್ಲಿ ನಡೆದಿದೆ.ಇದನ್ನೂ ಓದಿ:ಆದಿಪುರುಷ್ ಚಿತ್ರದವರ ವಿರುದ್ಧ FIR ದಾಖಲಿಸಿ; ಅಮಿತ್ ಶಾಗೆ ಪತ್ರ ಬರೆದ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘ!ಮೃತನನ್ನು ಅಲೀಮ್ ಶೇಖ್ ಎಂದು ಗುರುತಿಸಲಾಗಿದ್ದು, ಶನಿವಾರದಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಹುನ್‌ಪಾರಾ ಹತ್ತಿರದ ಮಧ್ಯಂಪುರದಲ್ಲಿ ತನ್ನ ಗ್ಯಾಂಗ್​ ಜತೆಗೆ ಬಾಂಬ್​ ಇಡಲು ಬಂದಿದ್ದ.ಸೆಣಬಿನ ತೋಟಗಳಲ್ಲಿ ಬಾಂಬ್‌ಗಳನ್ನು ಇಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಒಂದು ಬಾಂಬ್‌ಗಳಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಪರಿಣಾಮವಾಗಿ ಹಲವರು ಗಂಭೀರವಾಗಿ ಗಾಯಗೊಂಡು, ಶೇಖ್​ ಮೃತಪಟ್ಟಿದ್ದಾನೆ. ಈ ಮೂಲಕ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೂ ಮುನ್ನ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಬಾಂಬ್ ಇಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇದನ್ನು ತೃಣಮೂಲ ಕಾಂಗ್ರೆಸ್ ನಿರಾಕರಿಸಿದೆ. ಬೆಲ್ದಂಗ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಈಗಾಗಲೇ ಸೆಣಬಿನ ಗದ್ದೆಯಿಂದ ಸುಮಾರು 65 ಬಾಂಬ್‌ಗಳನ್ನು ಮತ್ತು ಮುರ್ಷಿದಾಬಾದ್‌ನಿಂದ 30ಕ್ಕೂ ಹೆಚ್ಚು ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ:ಮುಂಗಾರು ವಿಳಂಬ ಅನ್ನದಾತ ಕಂಗಾಲು; ದಶಕದಲ್ಲೇ ಹಿನ್ನೆಡೆ ಅನುಭವಿಸಿದ ವರ್ಷ 2023; ಒಂದು ಬೆಳೆ ಕೈತಪ್ಪುವ ಭೀತಿಬಂಗಾಳದಲ್ಲಿ ಜುಲೈ 8ರಂದು ಪಂಚಾಯತ್ ಚುನಾವಣೆಗಳು ನಡೆಯಲಿದ್ದು, ಜುಲೈ 11ರಂದು ಮತ ಎಣಿಕೆ ನಡೆಯಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + six =
Remember me
