ಭೋಪಾಲ್​:ತಾನು ಎಷ್ಟೇ ದೂರು ನೀಡಿದರೂ ಅದನ್ನು ಕಿವಿಗೆ ಹಾಕಿಕೊಳ್ಳದ ಅಧಿಕಾರಿಗಳ ವಿರುದ್ಧ ವ್ಯಕ್ತಿಯೋರ್ವ ದೂರುಗಳ ಪ್ರತಿಯನ್ನು ಮೈಮೇಲೆ ಅಂಟಿಸಿಕೊಂಡು ಅರೆಬೆತ್ತಲೆಯಾಗಿ ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ಮಧ್ಯಪ್ರದೇಶದ ನೀಮುಚ್​ ಜಿಲ್ಲೆಯಲ್ಲಿ ನಡೆದಿದೆ.
ಮುಕೇಶ್​ ಪ್ರಜಾಪತ್​ ಹೆಸರಿನ ವ್ಯಕ್ತಿಯೂ ಒಂದು ಸಾವಿರಕ್ಕೂ ಅಧಿಕ ಪುಟಗಳ ದೂರನ್ನು ಅಂಗಿಯ ರೀತಿ ಧರಿಸಿ ಅರೆಬೆತ್ತಲೆಯಾಗಿ ತೆವಳಿಕೊಂಡು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಿ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ರೋಶ ಹೊರಹಾಕಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಡಳಿತರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್​ ಕಿಡಿಕಾರಿದೆ.
नीमच में जनसुनवाई में रेंगते हुए पहुंचने वाला ये शख्स अपने साथ शिकायतों और सुबूतों के कागजों के ढेर को घसीटता हुआ@DrMohanYadav51सरकार की लाचारी दर्शा रहा है।इनका नाम मुकेश प्रजापति है जो न्याय की गुहार लगाने कलेक्टर कार्यालय पहुँचे है।pic.twitter.com/6Tmzpug5c9
ಇದನ್ನೂ ಓದಿ:ಪಾಕಿಸ್ತಾನದ ನೆಲದಲ್ಲಿ ಟೆಸ್ಟ್​ ಸರಣಿ ಗೆದ್ದು ಬೀಗಿದ ಬಾಂಗ್ಲಾ; ಕಮರಿತು ಆತಿಥೇಯರ WTC ಕನಸು
ಈ ಕುರಿತು ಮಾತನಾಡಿರುವ ಪ್ರಜಾಪತ್​, ಕಳೆದ ಏಳು ವರ್ಷಗಳಿಂದ ನ್ಯಾಯಕ್ಕಾಗಿ ನಾನು ಜಿಲ್ಲಾಧಿಕಾರಿಗಳ ಕಚೇರಿಗೆ ತಲೆ ಮೇಲೆ ಚಪ್ಪಲಿಯನ್ನು ಹೊತ್ತುಕೊಂಡು ಅಲೆದಾಡುತ್ತಿದ್ದೇನೆ. ಒಬ್ಬ ಸಾಮಾನ್ಯ ವ್ಯಕ್ತಿಯೂ ನ್ಯಾಯಕ್ಕಾಗಿ ಇಷ್ಟಲ್ಲಾ ಅಲೆದಾಡಬೇಕಾ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಈ ಕೂಡಲೇ ಮುಖ್ಯಮಂತ್ರಿಗಳಾದ ಮೋಹನ್​ ಯಾದವ್​ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಪ್ರಜಾಪತ್​ ಆಗ್ರಹಿಸಿದ್ದಾರೆ.
ಇತ್ತ ಪ್ರಜಾಪತ್​ ವಿಡಿಯೋ ವೈರಲ್​ ಆಗಿದ್ದು, ಕಾಂಗ್ರೆಸ್​ ಈ ಬಗ್ಗೆ ಪ್ರತಿಕ್ರಿಯಿಸಿ ಕಿಡಿಕಾರಿದೆ. ಈ ವ್ಯಕ್ತಿಯ ಸ್ಥಿತಿ ನೋಡಿದರೆ ರಾಜ್ಯದಲ್ಲಿ ಆಡಳಿತ ಹಾಗೂ ಕಾನೂನು ಸುವ್ಯಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನ್ಯಾಯಕ್ಕಾಗಿ ಒಬ್ಬ ವ್ಯಕ್ತಿ ಯಾಕಿಷ್ಟು ಪರದಾಡಬೇಕು ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕಾಂಗ್ರೆಸ್​ ಕಿಡಿಕಾರಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − 9 =
Remember me
