ಮುಂಬೈ:ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್​ ಆಗುವ ಭರದಲ್ಲಿ ಇಲ್ಲದಿರುವ ಕೆಲಸಕ್ಕೆ ಕೈ ಹಾಕಿ ಪೇಚಿಗೆ ಸಿಲುಕುತ್ತಾರೆ. ಅದೇ ರೀತಿ ಇದೀಗ ಯುವಕನೋರ್ವ ಇಲ್ಲದೇ ಇರುವ ಸಾಹಸ ಮಾಡಲು ಹೋಗಿ ಪೇಚಿಗೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯು ನವಿ ಮುಂಬೈನಲ್ಲಿ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ರಾಜಸ್ಥಾನ ನೋಂದಣಿಯ ಸ್ವಿಫ್ಟ್​ ಕಾರನ್ನು ನವಿ ಮುಂಬೈನಲ್ಲಿರುವ ಬ್ರಿಡ್ಜ್​ ಒಂದರ ಮೇಲೆ ವೇಗವಾಗಿ ಚಲಾಯಿಸುವ ವ್ಯಕ್ತಿ ನೋಡ ನೋಡುತ್ತಿದ್ದಂತೆ ಡೋರ್​ ತೆಗೆದು ಅದರ ರೂಫ್​ ಮೇಲೆ ನಿಂತು ಫೋಸ್​ ನೀಡುವುದನ್ನು ನೋಡಬಹುದಾಗಿದೆ. ಹಿಂಬದಿ ಮತ್ತೊಂದು ವಾಹನದಲ್ಲಿ ಬರುತ್ತಿರುವ ವ್ಯಕ್ತಿ ಅದನ್ನು ರೆಕಾರ್ಡ್​ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇತ್ತ ವಿಡಿಯೋ ವೈರಲ್​ ಆಗುತ್ತಿದ್ದಂತೆ ಕಿಡಿಕಾರಿರುವ ನೆಟ್ಟಿಗರು ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ಕಮೆಂಟ್​ಗಳ ಮೂಲಕ ಆಗ್ರಹಿಸಿದ್ದಾರೆ. ಇತ್ತ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, 5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಧಿಕೃತವಾಗಿ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.
Iska part – 2 police upload karegi 😁pic.twitter.com/gvnXw1PEOw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
