ಬಿಹಾರ:ಚಲಿಸುವ ರೈಲು ಹತ್ತಲು ಹೋಗಿ ಹಳಿಯ ಮೇಲೆ ಬಿದ್ದ ವ್ಯಕ್ತಿ ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಬಿಹಾರದ ಬಗಾಹ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಡಾ. ಶಿವಾನಂದ ಜಾಮದಾರ ಅಭಿಪ್ರಾಯ; ಶಿಕ್ಷಣಕ್ಕೆ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಕೊಡುಗೆ ಅಪಾರ
ಬಿಹಾರದ ಬಗಾಹ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬ, ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಬಿದ್ದಿದ್ದಾನೆ. ರೈಲಿನ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರೈಲ್ವೇ ಪೊಲೀಸರು ರೈಲು ಹೋಗುವವರೆಗೂ ಅಲ್ಲೇ ಇರಲು ತಿಳಿಸಿದ್ದು, ತದನಂತರ ಆತನನ್ನು ಮೇಲಕ್ಕೆ ಎತ್ತಿದ್ದಾರೆ. ಪವಾಡದಂತೆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದು, ಸಣ್ಣ-ಪುಟ್ಟ ಗಾಯಗಳಾಗಿವೆ.
#Bihar
पश्चिम चंपारण के बगहा स्टेशन पर ट्रेन पकड़ने के दौरान पटरियों पर#गिरा_शख्स
ऊपर से गुजर गई पूरी#ट्रेन, सही सलामत बच गया शख्स@RailwaySevapic.twitter.com/SMKEQy0NUA
— Goldy Srivastav (@GoldySrivastav)September 30, 2023

ರೈಲು ಹಳಿ ಮೇಲೆ ಬಿದ್ದ ವ್ಯಕ್ತಿಯನ್ನು 24 ವರ್ಷದ ಪ್ರತೀಕ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಿಹಾರದ ಬೆಟ್ಟಿಯ ಉತ್ತರವಾರಿ ಪೋಖರಾ ಪ್ರದೇಶದ ನಿವಾಸಿ ಎಂದು ಹೇಳಲಾಗಿದೆ. ಬಿಸ್ಕೆಟ್ ಮತ್ತು ತಂಪು ಪಾನೀಯಗಳನ್ನು ಖರೀದಿಸಲು ರೈಲಿನಿಂದ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 13 =
Remember me
