ಉತ್ತರ ಪ್ರದೇಶ:ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಗಂಟೆಗೆ 100 ಕಿ.ಮೀ ಮೀರಿದ ವೇಗದಲ್ಲಿ ಸಾಗುವ ದ್ವಿಚಕ್ರ ವಾಹನ ಸವಾರರಿಗೆ ಉಚಿತ ಹೆಲ್ಮೆಟ್ ನೀಡುವ ಮೂಲಕ ಹೆಲ್ಮೆಟ್ ಸುರಕ್ಷತೆಯನ್ನು ಉತ್ತೇಜಿಸಲು ರಸ್ತೆ ಸುರಕ್ಷತಾ ವಕೀಲ ರಾಘವೇಂದ್ರ ಕುಮಾರ್ ವಿಭಿನ್ನವಾದ ಅಭಿಯಾನ ಕೈಗೊಂಡಿದ್ದಾರೆ.
‘ಹೆಲ್ಮೆಟ್ ಮ್ಯಾನ್ ಆಫ್ ಇಂಡಿಯಾ’ ಎಂದೇ ಖ್ಯಾತರಾಗಿರುವ ರಾಘವೇಂದ್ರ ಕುಮಾರ್ ಅವರು ಹೆಲ್ಮೆಟ್ ಧರಿಸಿ ಕಾರನ್ನು ಚಲಾಯಿಸುತ್ತಿದ್ದಾಗ ಹೆಲ್ಮೆಟ್ ಧರಿಸದ ಬೈಕ್ ಸವಾರನಿಗೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಬಳಿಕ ಹೊಸ ಹೆಲ್ಮೆಟ್ ನೀಡಿದ್ದಾರೆ. ಬಳಿಕ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ್ದಾರೆ.
ಇದನ್ನೂ ಓದಿ:ಕಲಬುರಗಿ | ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಪ್ರಾಣಬಿಟ್ಟ ಹೆಡ್​​ ಕಾನ್​​ಸ್ಟೇಬಲ್
अपनी कार की रफ्तार 100 से ऊपर नहीं ले जाता लेकिन लखनऊ एक्सप्रेसवे पर एक व्यक्ति जब मुझे ओवरटेक किया मैं दंग रह गया क्योंकि बिना हेलमेट उसकी रफ्तार हमसे ज्यादा थी. उसे सुरक्षा कवच हेलमेट देने के लिए 100 से ऊपर अपनी गाड़ी को भगाना पड़ा अंत में उसे पकड़ ही लिया.#Helmetman@PMOIndiapic.twitter.com/BbpYbQ43C7— Helmet man of India (@helmet_man_)March 14, 2023
अपनी कार की रफ्तार 100 से ऊपर नहीं ले जाता लेकिन लखनऊ एक्सप्रेसवे पर एक व्यक्ति जब मुझे ओवरटेक किया मैं दंग रह गया क्योंकि बिना हेलमेट उसकी रफ्तार हमसे ज्यादा थी. उसे सुरक्षा कवच हेलमेट देने के लिए 100 से ऊपर अपनी गाड़ी को भगाना पड़ा अंत में उसे पकड़ ही लिया.#Helmetman@PMOIndiapic.twitter.com/BbpYbQ43C7
ಸದ್ಯ ರಾಘವೇಂದ್ರ ಕುಮಾರ್ ಹೆಲ್ಮೆಟ್ ಕುರಿತು ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಹಾರಾಷ್ಟ್ರ ಪೊಲೀಸರು ಟ್ವೀಟ್ ಮಾಡಿ, ರಾಘವೇಂದ್ರ ಅವರ ಕಾಳಜಿಯನ್ನು ಶ್ಲಾಘಿಸಿ, ನಿಮ್ಮ ಈ ಕಾರ್ಯ ಇನ್ನಷ್ಟು ಜನರಿಗೆ ಪ್ರೇರೇಪಣೆ ನೀಡಲಿ ಎಂದು ಹೇಳಿದೆ.
‘ಹೆಲ್ಮೆಟ್ ಮ್ಯಾನ್ ಆಫ್ ಇಂಡಿಯಾ’ ಹ್ಯಾಂಡಲ್‌ ಈ ವಿಡಿಯೋವನ್ನು ಹಂಚಿಕೊಂಡಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಬೈಕ್ ಸವಾರ ತನ್ನನ್ನು ನಿಖಿಲ್ ತಿವಾರಿ ಎಂದು ಪರಿಚಯಿಸಿಕೊಳ್ಳುವುದನ್ನು ಕಾಣಬಹುದು. ವಿಡಿಯೋವನ್ನು ಈಗಾಗಲೇ 6 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
