ಸಾಗರ್​:ದೇಶದಲ್ಲಿ ಜನರು ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಥವುಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರ್ಪಡೆಗೊಂಡಿದೆ. ಇಲ್ಲೊಬ್ಬ ವ್ಯಕ್ತಿ ಊಟ ಮಾಡುತ್ತಲೇ ಕುಸಿದು ಬಿದ್ದು ಸತ್ತಿದ್ದು, ಆ ಕುರಿತ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಮಧ್ಯಪ್ರದೇಶದ ಸಾಗರ್ ಎಂಬಲ್ಲಿ ಈ ಪ್ರಕರಣ ನಡೆದಿದೆ. ಉದಲ್ ಯಾದವ್ ಎಂಬಾತ ಕುಸಿದು ಬಿದ್ದು ಸಾವಿಗೀಡಾದ ಉದ್ಯೋಗಿ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ-44ರಲ್ಲಿನ ಮಾಲ್ತೋನ್​ ಟೋಲ್​ ಪ್ಲಾಜಾದಲ್ಲಿ ಈತ ಕೆಲಸ ಮಾಡುತ್ತಿದ್ದ.

ಮಧ್ಯಾಹ್ನ ಈತ ಊಟ ಮಾಡಲೆಂದು ತನ್ನ ರೂಮ್​ಗೆ ಹೋಗಿದ್ದು, ಅಲ್ಲಿ ಆಹಾರ ಸೇವಿಸುತ್ತಲೇ ಕುಸಿದು ಬಿದ್ದಿದ್ದಾನೆ. ಮೂರ್ಛೆ ಹೋದ ಅವನನ್ನು ಹತ್ತಿರ ಇದ್ದ ಇತರ ಸಹೋದ್ಯೋಗಿಗಳು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಆತ ಸತ್ತಿರುವುದಾಗಿ ಆಸ್ಪತ್ರೆಯವರು ತಿಳಿಸಿದ್ದಾರೆ. ಸಹಜ ಸಾವು ಎಂದು ಹೇಳಲಾಗಿದ್ದರೂ ಸಾವಿಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ ಎನ್ನಲಾಗಿದೆ. ಹೀಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
