ಕೋಲ್ಕತ:ಅತ್ಯಂತ ದುಬಾರಿ ಬೆಲೆಯ ವಾಚ್​ ಇದ್ದ ಮಾತ್ರಕ್ಕೆ ನಮ್ಮ ಸಮಯ ಚೆನ್ನಾಗಿರಬೇಕಂತೇನೂ ಇಲ್ಲ ಎಂಬುದಕ್ಕೆ ಈ ಪ್ರಕರಣ ನಿದರ್ಶನವಾಗಬಲ್ಲದು. ಏಕೆಂದರೆ ಇಲ್ಲೊಬ್ಬನ ಬಳಿ 30 ಕೋಟಿ ರೂಪಾಯಿಯ ವಾಚ್​ಗಳಿದ್ದರೂ ಈತನ ಟೈಮ್​ ಮಾತ್ರ ಸರಿ ಇರಲಿಲ್ಲ.
ಹೌದು.. ಕೋಲ್ಕತ ವಿಮಾನನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಆತನ ಬಳಿ ಇದ್ದ ದುಬಾರಿ ಬೆಲೆಯ ವಾಚ್​ನೊಂದಿಗೆ ವಶಕ್ಕೆ ಪಡೆಯಲಾಗಿದೆ. ಡೈರೆಕ್ಟೊರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್​ (ಡಿಆರ್​ಐ) ಅಧಿಕಾರಿಗಳು ಈ ಕ್ರಮ ಜರುಗಿಸಿದ್ದಾರೆ. ಅತ್ಯಂತ ದುಬಾರಿ ಬೆಲೆಯ ವಾಚ್​ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಡಿಆರ್​ಐ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..
ಬಳಿಕ ಈತನ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಹಲವಾರು ವಾಚ್​ಗಳು ಸಿಕ್ಕಿವೆ. ಈತನ ಬಳಿ ವಿವಿಧ ಪ್ರತಿಷ್ಠಿತ ಕಂಪನಿಗಳ ದುಬಾರಿ ಬೆಲೆಯ ಒಟ್ಟು 34 ವಾಚ್​ಗಳು ಪತ್ತೆಯಾಗಿವೆ. ಇವುಗಳ ಒಟ್ಟು ಮೊತ್ತ 30 ಕೋಟಿ ರೂ. ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆರೋಪಿ ಸಿಂಗಾಪುರದಿಂದ ಬಂದು ಕೋಲ್ಕತ ವಿಮಾನ ನಿಲ್ದಾಣದಲ್ಲಿ ಇಳಿದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 1 =
Remember me
