ಭೋಪಾಲ್​:ಪ್ರೀತಿ ಪಾತ್ರರಿಗಾಗಿ ಏನಾದರೂ ಮಾಡುವುದಕ್ಕೆ ರೆಡಿ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಹೆಂಡತಿಗಾಗಿ ಆಕ್ಸಿಜನ್ ಸಿಲಿಂಡರ್ ಇದ್ದ ಆ್ಯಂಬುಲೆನ್ಸ್​ ಅನ್ನೇ ಹೈಜಾಕ್ ಮಾಡಿದ್ದಾನೆ.
ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆ ವ್ಯಕ್ತಿಯ ಹೆಂಡತಿ ಗರ್ಭಿಣಿಯಾಗಿದ್ದು, ನಾಲ್ಕು ದಿನಗಳ ಹಿಂದೆ ಆಕೆಗೆ ಕರೊನಾ ಸೋಂಕು ದೃಢವಾಗಿದೆ. ಶುಕ್ರವಾರ ರಾತ್ರಿಯಿಂದ ಆಕೆಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆತ ಆ್ಯಂಬುಲೆನ್ಸ್​ಗೆ ಕರೆ ಮಾಡಿ ನನ್ನ ಹೆಂಡತಿಯನ್ನು ದಾಖಲಿಸಿಕೊಳ್ಳಿ ಎಂದು ಮನವಿ ಮಾಡಿದ್ದಾನೆ. ಆದರೆ ರಾತ್ರಿ ಆ್ಯಂಬುಲೆನ್ಸ್ ಬಂದಿಲ್ಲ. ಶನಿವಾರ ಬೆಳಗ್ಗೆ 9.30ರ ಸಮಯಕ್ಕೆ ಆ್ಯಂಬುಲೆನ್ಸ್ ಬಂದಿದೆ.
ಆ್ಯಂಬುಲೆನ್ಸ್​ನಲ್ಲಿ ಆಕ್ಸಿಜನ್ ಸಿಲಿಂಡರ್​ ಇರುವುದನ್ನು ಕಂಡ ಪತಿ, ಅದರ ಡ್ರೈವರ್​ನ್ನು ಕೆಳಗಿಳಿಸಿ, ಗಾಡಿಯೊಳಗೆ ಸೇರಿಕೊಂಡಿದ್ದಾನೆ. ಮನೆಯಿಂದ ಸ್ವಲ್ಪ ದೂರ ಹೋಗಿ ಅಲ್ಲಿಯೇ ಗಾಡಿ ನಿಲ್ಲಿಸಿಕೊಂಡಿದ್ದಾನೆ. ಆ್ಯಂಬುಲೆನ್ಸ್ ಡ್ರೈವರ್ ಈ ವಿಚಾರವಾಗಿ ಮೇಲಿನ ಅಧಿಕಾರಿಗೆ ಮಾಹಿತಿ ನೀಡಿದ್ದಾನೆ. ಅದಾದ ನಂತರ ಪೊಲೀಸರಿಗೆ ವಿಚಾರ ಮುಟ್ಟಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕಿದ್ದಾರೆ. ಸತತ ಎರಡು ಗಂಟೆಗಳ ಕಾಲ ಮನವೊಲಿಸುವ ಪ್ರಯತ್ನ ಮಾಡಿ ನಂತರ ಆತನ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. (ಏಜೆನ್ಸೀಸ್)
ಕರೊನಾದಿಂದ ಗುಣಮುಖವಾಗುತ್ತಿದ್ದಂತೆಯೇ ಮನೆ ಬಾಗಿಲಿಗೆ ಬಂತು 5 ಕೋಟಿ ರೂಪಾಯಿ!

ಕೇಂದ್ರ ಸಚಿವ ಬಾಬುಲ್ ಸುಪ್ರಿಯೊಗೆ ಎರಡನೇ ಬಾರಿಗೆ ಕರೊನಾ ದೃಢ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 15 =
Remember me
