ನವದೆಹಲಿ:ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಮೆಟ್ರೋ ಒಂದಿಲ್ಲೊಂದು ವಿಚಾರಕ್ಕೆ ಜನತೆಯ ಗಮನ ಸೆಳೆಯುತ್ತಿದ್ದು, ಇದೀಗ ಮತ್ತೊಂದು ವಿಚಾರಕ್ಕೆ ಎಲ್ಲರ ಗಮನ ಸೆಳೆದಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಉದ್ಯೋಗ ಭವನ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಈ ಕುರಿತು ಪ್ರೆತಿಕ್ರಿಯಿಸಿರುವ ಡಿಎಂಆರ್​ಸಿಎಲ್​ನ ಹಿರಿಯ ಅಧಿಕಾರಿಯೊಬ್ಬರು, ಘಟನೆ ಬೆಳಗ್ಗೆ 11:30ರ ಸುಮಾರಿಗೆ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ. ಆತನ ಜೇಬಿನಲ್ಲಿ ಮೊಬೈಲ್​ ಸಂಖ್ಯೆ ಒಂದು ದೊರೆತ್ತಿದ್ದು, ಅದನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಮೃತನ ಸಂಬಂಧಿಕರು ಆಗಮಿಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 19 =
Remember me
