ನವದೆಹಲಿ:ತನ್ನ ಸಾಕುಪ್ರಾಣಿಗಳನ್ನು ಶಾಖದಿಂದ ರಕ್ಷಿಸಲು ವ್ಯಕ್ತಿಯೊಬ್ಬ ಮಾಡಿದ್ದನ್ನು ನೋಡಿ ಸಾಮಾಜಿಕ ಮಾಧ್ಯಮ ಬಳಕೆದಾರರೂ ಶಾಕ್ ಆಗಿದ್ದಾರೆ. ಇದೇ ಕಾರಣಕ್ಕೆ ಈ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.
ಈ ಋತುವಿನಲ್ಲಿ ಮನುಷ್ಯರಷ್ಟೇ ಅಲ್ಲ ಪ್ರಾಣಿಗಳಿಗೂ ಬಿಸಿಲಿನ ಬೇಗೆ ಎದುರಾಗಿದೆ. ಸುಡು ಬಿಸಿಲಿನಲ್ಲಿ ಜನ ಮನೆಯಿಂದ ಹೊರಗೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನವರು ಫ್ಯಾನ್, ಕೂಲರ್ ಅಥವಾ ಎಸಿ ಮೊರೆ ಹೋಗುತ್ತಿದ್ದಾರೆ.
A post shared by manjeet malik (@manjeetmalik567)
ರೈತನೊಬ್ಬ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?:ಒಂದು ಕೋಣೆಯಲ್ಲಿ ಮೂರು ಎಮ್ಮೆಗಳು ಮತ್ತು ಎರಡು ಕರುಗಳು ಇರುವುದನ್ನು ನೋಡಬಹುದು. ಅಚ್ಚರಿಯ ಸಂಗತಿಯೆಂದರೆ ಎಸಿಯ ಜೊತೆಗೆ ಲೈಟ್, ಫ್ಯಾನ್ ಎಲ್ಲ ವ್ಯವಸ್ಥೆ ಮಾಡಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 10ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 4 =
Remember me
