ನವದೆಹಲಿ:ನಜಾಫ್‌ಗಢ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಸೋಮವಾರ (ಜುಲೈ 31) ದೆಹಲಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪತ್ರಕರ್ತರು ಸತ್ಯಾಸತ್ಯತೆ ಪರಾಮರ್ಶಿಸಿ ವರದಿ ಮಾಡಿ: ಶಾಸಕ ದೊಡ್ಡನಗೌಡ ಪಾಟೀಲ್
ಘಟನೆಯ ವಿವರ:ಸೋಮವಾರ ಬೆಳಗ್ಗೆ 9:26ರ ಸಮಯಕ್ಕೆ ದೆಹಲಿಯ ನಜಾಫ್‌ಗಢದಲ್ಲಿ ವ್ಯಕ್ತಿಯೊಬ್ಬ ರೈಲಿನ ಮುಂದೆ ಜಿಗಿದು ಸಾವನ್ನಪ್ಪಿದರು ಎಂದು ಹಿರಿಯ​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಪ್ರಾಣ ಕಳೆದುಕೊಂಡ ವ್ಯಕ್ತಿಯನ್ನು ನಜಾಫ್‌ಗಢದ ಪ್ರೇಮ್ ನಗರದ ನಿವಾಸಿ ಮನೀಶ್ ಕುಮಾರ್ ಎಂದು ಗುರುತಿಸಲಾಗಿದೆ.
“ಘಟನೆ ಸಂಭವಿಸಿದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಮೃತ ಕುಮಾರ್ ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಂಥಪಾಲಕರಾಗಿದ್ದರು. ಅವರಿಗೆ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ. ಸಿಆರ್‌ಪಿಸಿಯ ಸೆಕ್ಷನ್ 174ರ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ, ಮತ್ತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).
ಮಾಜಿ ರಣಜಿ ಆಟಗಾರ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ವ್ಯಕ್ತಿಯಿಂದ 23 ಕೆಜಿ ಗಾಂಜಾ ವಶ!; ಆರೋಪಿ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
