ಉತ್ತರಪ್ರದೇಶ:ಇಲ್ಲೊಬ್ಬ ವ್ಯಕ್ತಿ ಅತ್ಯಾಚಾರ ಮಾಡಿದ್ದಲ್ಲದೆ, ಆ ಕುರಿತು ದೂರು ನೀಡಿದ ಸಿಟ್ಟಿಗೆ ಸಂತ್ರಸ್ತೆಯನ್ನೇ ಅಪಹರಣ ಮಾಡಿದ ಪ್ರಸಂಗವೊಂದು ನಡೆದಿದೆ. ಆದರೆ ಅಪಹೃತ ಸಂತ್ರಸ್ತೆಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉತ್ತರಪ್ರದೇಶದ ತಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ವೀರೇಶ್​ ಶರ್ಮಾ ಎಂಬಾತನೇ ಅತ್ಯಾಚಾರ ಮತ್ತು ಅಪಹರಣದ ಆರೋಪಿ. ಈತ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅದೇ ಶಾಲೆಯ 22 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಅಲ್ಲದೆ ಆತ ಆ ಕುರಿತು ವಿಡಿಯೋ ಕೂಡ ಮಾಡಿಕೊಂಡಿದ್ದು, ಅದು ವೈರಲ್ ಆಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ಪೊಲೀಸರಿಗೆ ಜುಲೈ 27ರಂದು ದೂರು ನೀಡಿದ್ದರು. ಆದರೆ ದೂರು ನೀಡಿದ ಸಿಟ್ಟಿಗೆ ಅದೇ ದಿನ ಆರೋಪಿ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ. ಈ ಬಗ್ಗೆ ತಂದೆ ಮತ್ತೆ ಪೊಲೀಸರಿಗೆ ಅಪಹರಣ ದೂರು ನೀಡಿದ್ದರು.
ದೂರಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆಗಿಳಿದಾಗ ಸಂತ್ರಸ್ತೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಪತ್ತೆಯಾಗಿದ್ದು, ಆಕೆಯನ್ನು ರಕ್ಷಿಸಿ ಹೇಳಿಕೆಯನ್ನು ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರೇಮಿಯೇ ಪ್ರೇಯಸಿಯ ರುಂಡ ಕಡಿದ ಪ್ರಕರಣ; ಕೊಲೆಗೆ ಸಹಕರಿಸಿದ್ದ ತಂದೆ, ಮದ್ವೆ ಮಾಡಿಸಿದ್ದ ತಾಯಿಯ ಬಂಧನ..

ಅಪಾರ್ಟ್​ಮೆಂಟ್​​ನ 2ನೇ ಮಹಡಿಯಿಂದ ಬಿದ್ದು ಬಾಲಕ ಸಾವು..

ಬುಲೆಟ್​​ನ ಹಿಂದೊಂದು ನಂಬರ್, ಮುಂದೊಂದು ನಂಬರ್; 29 ಸಾವಿರ ರೂ. ದಂಡ, ಬೈಕ್ ಸವಾರ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eight =
Remember me
