ಉತ್ತರಪ್ರದೇಶ:ಗಂಡ-ಹೆಂಡತಿ ಇಬ್ಬರ ಶವವೂ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದ್ದು, ಪತ್ನಿಯ ಕತ್ತನ್ನು ಸೀಳಿ ಕೊಲೆ ಮಾಡಲಾಗಿದೆ. ಮತ್ತೊಂದೆಡೆ ವಿಷ ಕುಡಿದು ಸಾವಿಗೀಡಾಗಿದ್ದ ಪತಿಯ ಶವವೂ ಅಲ್ಲೇ ಕಂಡು ಬಂದಿದೆ. ಉತ್ತರಪ್ರದೇಶದಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಉತ್ತರಪ್ರದೇಶದ ಬರೇಲಿಯ ಸೀಶ್​ಘರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸೋಹನ್​ಲಾಲ್​ (30) ಹಾಗೂ ಆತನ ಪತ್ನಿ ಕೌಶಲ್ಯದೇವಿ (30) ಅವರ ಶವ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದೆ ಎಂದು ಎಸ್​ಪಿ ರಾಜ್​ಕುಮಾರ್ ಅಗರ್​ವಾಲ್ ತಿಳಿಸಿದ್ದಾರೆ.
ಕೌಶಲ್ಯ ಕತ್ತನ್ನು ಸೀಳಿ ಕೊಲೆ ಮಾಡಲಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಈ ದಂಪತಿ ಇಂದು ಜಾನುವಾರಿಗೆ ಮೇವು ತರಲೆಂದು ಜೊತೆಯಾಗಿ ಹೋಗಿದ್ದು, ಆ ಬಳಿಕ ಈ ಪ್ರಕರಣ ನಡೆದಿದೆ. ಸಾವಿಗೀಡಾಗಿರುವ ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಇಬ್ಬರ ಶವವನ್ನೂ ಮರಣೋತ್ತರ ಪರೀಕ್ಷೆಗೆ ಕಳಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರಲ್ಲಿ ಮತ್ತೆ ಆತಂಕ?; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಬೆದರಿಕೆ!

ಮದ್ವೆಯಾದ 3 ತಿಂಗಳ ಬಳಿಕ ಗೊತ್ತಾಯ್ತು ಆ ವಿಷ್ಯ!; ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ 52 ವರ್ಷದ ವರ..

ಮದ್ಯಪಾನ ಮಾಡಿಕೊಂಡೇ ಶಾಲೆಗೆ ಬರುತ್ತಿದ್ದ ಶಿಕ್ಷಕಿ; ಬಾಟಲಿ ಸಮೇತ ಸಿಕ್ಕಿಬಿದ್ದು ಅಮಾನತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 11 =
Remember me
