ಬಿಲಾಸ್​​ಪುರ:ಸಾಯಿಸುವುದೇ ಕ್ರೌರ್ಯ. ಅದರಲ್ಲೂ ಕೊಂದು ಶವವನ್ನು ಕತ್ತರಿಸಿ ತುಂಡು ತುಂಡು ಮಾಡುವಂಥ ಕ್ರೌರ್ಯ ಇತ್ತೀಚೆಗೆ ಹೆಚ್ಚಾಗಿದೆ. ಅದರಲ್ಲೂ ಇಲ್ಲೊಬ್ಬ ಪತ್ನಿಯನ್ನು ಕೊಂದು ತುಂಡು ತುಂಡು ಮಾಡಿ ಶವದ ಭಾಗಗಳನ್ನು ವಾಟರ್​ ಟ್ಯಾಂಕ್​ಗೆ ಹಾಕಿಟ್ಟ ಪ್ರಕರಣವೊಂದು ನಡೆದಿದೆ.
ಇದನ್ನೂ ಓದಿ:ಕುಸಿದು ಬಿದ್ದು ಸಾವಿಗೀಡಾದ ಕ್ರಿಕೆಟಿಗ; ಫಲಿಸಲಿಲ್ಲ ಜೀವ ಉಳಿಸಿಕೊಳ್ಳುವ ಪ್ರಯತ್ನ
ಛತ್ತೀಸ್​ಘಡದ ಬಿಲಾಸ್​ಪುರದ ಉಸ್ಲಾಪುರ ಎಂಬಲ್ಲಿ ಈ ಘಟನೆ ನಡೆದಿದೆ. ಪವನ್​ಸಿಂಗ್ ಠಾಕೂರ್ ಕೊಲೆ ಮಾಡಿದ ಆರೋಪಿ. ಈತ ಪತ್ನಿಯನ್ನು ಕೊಲೆ ಮಾಡಿ ತುಂಡು ತುಂಡಾಗಿಸಿ ವಾಟರ್​ ಟ್ಯಾಂಕ್​ನೊಳಗೆ ಹಾಕಿದ್ದ. ಹತ್ತಿರದ ಮನೆಯವರು ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ವಿಷಯ ಬಹಿರಂಗಗೊಂಡಿದೆ. ಪವನ್ ಪತ್ರಿ ಸತಿ ಸಾಹು ಕೊಲೆಯಾದ ಮಹಿಳೆ.
ಇದನ್ನೂ ಓದಿ:ಸ್ಮಾರ್ಟ್​ ಟ್ರ್ಯಾಪ್​: ಪ್ರಶಾಂತ್ ಮಾಡಾಳ್​ಗೆ ದೂರುದಾರ ಬಲೆ ಹೆಣೆದಿದ್ದು ಹೇಗೆ?
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಒಂದು ತಿಂಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಇನ್ನೊಂದೆಡೆ ಶವದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈತ ಪತ್ನಿಯ ಶೀಲ ಶಂಕಿಸಿ ಈ ಕೊಲೆ ಮಾಡಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮೇಕಪ್​ನಿಂದಾಗಿ ಬಣ್ಣಗೆಟ್ಟಿತು ವಧುವಿನ ಮುಖ; ಮದುವೆಯೇ ಬೇಡ ಎಂದ ವರ

ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
