ನವದೆಹಲಿ:ಆಕೆ ತನ್ನ ಬಳಿ ಮಾತನಾಡುತ್ತಿಲ್ಲ, ಫೋನ್​ ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ಬೇಸತ್ತ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ತಲೆಗೆ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈ ಪ್ರಕರಣ ನಡೆದಿದೆ. ದೆಹಲಿಯ ಮಾಳವೀಯ ನಗರದಲ್ಲಿ ಈ ಕೊಲೆ ನಡೆದಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ನರ್ಗಿಸ್ (25) ಕೊಲೆಯಾದ ವಿದ್ಯಾರ್ಥಿನಿ. ಈಕೆ ಇಲ್ಲಿನ ಕಮಲಾ ನೆಹರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆದರೆ ಇಂದು ಇಲ್ಲಿನ ಅರಬಿಂದೋ ಕಾಲೇಜ್ ಬಳಿ ಪಾರ್ಕ್​ನಲ್ಲಿ ಈಕೆಯ ಮೃತದೇಹ ಪತ್ತೆಯಾಗಿದ್ದು, ತಲೆಗೆ ಪೆಟ್ಟಾಗಿರುವುದು ಕಂಡುಬಂದಿದೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಈಕೆ ತನ್ನ ದೂರದ ಸಂಬಂಧಿ ಇರ್ಫಾನ್​ ಜೊತೆ ಪಾರ್ಕ್​ಗೆ ಬಂದಿದ್ದಳು. ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇರ್ಫಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾನು ಆಕೆಯನ್ನು ಮದುವೆಯಾಗಬೇಕು ಎಂದು ಬಯಸಿದ್ದೆ. ಆದರೆ ತನಗೆ ಉದ್ಯೋಗ ಇಲ್ಲ ಎಂಬ ಕಾರಣಕ್ಕೆ ಆಕೆಯ ಮನೆಯವರು ಮದುವೆಗೆ ನಿರಾಕರಿಸಿದ್ದರು. ಆ ಬಳಿಕ ನರ್ಗಿಸ್ ತನ್ನ ಬಳಿ ಮಾತನಾಡುವುದನ್ನು ನಿಲ್ಲಿಸಿದಳು. ತನ್ನ ಕರೆ ಸ್ವೀಕರಿಸುತ್ತಿರಲಿಲ್ಲ, ಬೇಜಾರಾಗಿ ಕೊಂದೆ ಎಂದು ಆರೋಪಿ ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಯಾರೂ ಸಾವಿಗೀಡಾಗದಿರಲಿ ಎಂದು ಜನರನ್ನು ಸೇರಿಸಿ ಮೃತ್ಯುಂಜಯ ಜಪ ಮಾಡಿಸಿದ ವ್ಯಕ್ತಿ ಮೇಲೆ ಕೇಸ್​ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
