ಚೆನ್ನೈ:ಆಘಾತಕಾರಿ ಘಟನೆಯೊಂದರಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಹತ್ಯೆಗೈದು ಬಳಿಕ ಮೃತದೇಹದ ಪೋಟೋವನ್ನು ವಾಟ್ಸ್​ಅಪ್​ ಸ್ಟೇಟಸ್​ಗೆ ಹಾಕಿ ವಿಕೃತಿ ಮೆರೆದಿರುವ ಘಟನೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಫೌಸಿಯಾ (20) ಎಂದು ಗುರುತಿಸಲಾಗಿದ್ದು, ಪೊಲೀಸರು ಈಕೆಯ ಪ್ರಿಯಕರ ಆಶಿಕ್​ (20)ನನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು ಕೇರಳದ ಕೊಲ್ಲಂ ಮೂಲದವರು ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಆಶಿಕ್​ ಹಾಗೂ ಫೌಸಿಯಾ ಇಬ್ಬರು ಪರಿಚುಸ್ಥರಾಗಿದ್ದು, ಮೃತ ಫೌಸಿಯಾ ಚೆನ್ನೈನಲ್ಲಿ ನರ್ಸಿಂಗ್​ ವ್ಯಾಸಂಗ ಮಾಡುತ್ತಿದ್ದಳು. ಇತ್ತೀಚಿಗೆ ಆಶಿಕ್​ ಬೇರೊಂದು ಹುಡುಗಿಯ ಜತೆ ಸ್ನೇಹ ಬೆಳೆಸಿದ್ದ ಈ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆಯಾಗಿತ್ತು. ಇದೇ ವಿಚಾರವಾಗಿ ಮಾತನಾಡಲು ಶುಕ್ರವಾರ ಕ್ರೋಮ್​ಪೇಟ್​ ಪೊಲೀಸ್​ ಠಾಣೆ ವ್ಯಾಪ್ತಿಯ ಲಾಡ್ಜ್​ ಒಂದರಲ್ಲಿ ರೂಂ ಒಂದನ್ನು ಬಾಡಿಗೆಗೆ ಪಡೆದಿದ್ದರು.
ಇದನ್ನೂ ಓದಿ:ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ; ಕಿಡ್ನಾಪ್ ಶಂಕೆ
ರೂಂ ಪ್ರವೇಶಿಸಿದ ಬಳಿಕ ಇಬ್ಬರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿಗೆದ್ದ ಆರೋಪಿ ಆಶಿಕ್​ ಆಕೆಯ ತಲೆಗೆ ಬಲವಾಗಿ ಹೊಡೆದಿದ್ದು, ಬಳಿಕ ಧರಿಸಿದ್ದ ಟಿ-ಶರ್ಟ್​ನಿಂದ ಆಕೆಯ ಕತ್ತಿಗೆ ಸುತ್ತಿ ಉಸಿರುಗಟ್ಟಿಸಿ ಹತ್ಯೆ ಮಾಡಿ ಬಳಿಕ ಆಕೆಯ ಮೃತದೇಹದ ಫೋಟೋವನ್ನು ವಾಟ್ಸ್​ಅಪ್​ ಸ್ಟೇಟ್ಸ್​ಗೆ ಹಾಕಿ ಹೋಟೆಲ್​ನಿಂದ ಪರಾರಿಯಾಗಿದ್ದ. ಸ್ಟೇಟಸ್​ ನೋಡಿದ ಫೌಸಿಯಾ ಸ್ನೇಹಿತರು ಕೂಡಲೇ ಪೊಲೀಸರಿಗೆ ಈ ವಿಚಾರ ತಿಳಿಸಿದ್ದು, ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಫೌಸಿಯಾ ಪೋಷಕರಿಗೆ ವಿಚಾರವನ್ನು ತಿಳಿಸಲಾಗಿದ್ದು, ಮರತದೇಹವನ್ನು ಕ್ರೋಮ್​ಪೇಟ್​ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
