ಮುಂಬೈ:ಅಕ್ರಮ ಸಂಬಂಧದಿಂದಾಗಿ ಅನೇಕ ಕುಟುಂಬಗಳೇ ಮುರಿದುಬೀಳುತ್ತವೆ. ಆದರೂ ಕೆಲವರು ಅಂತಹ ತಪ್ಪಿಗೆ ಕೈ ಹಾಕುವುದನ್ನು ನಿಲ್ಲಿಸುವುದಿಲ್ಲ. ಅದೇ ರೀತಿ ವ್ಯಕ್ತಿಯೊಬ್ಬ ಶಿಕ್ಷಕಿಯೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿ ನಂತರ ಆಕೆಯ ಟಾರ್ಚರ್​ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಖಮ್‌ಗಾಂವ್ ತಾಲೂಕಿನ ಪಹುರ್ಜಿರಾ ನಿವಾಸಿ ಪ್ರಭುದಾಸ್ ಬೋಲೆಗೆ ಮದುವೆಯಾಗಿತ್ತು. ಆದರೆ ಹೆಂಡತಿಯೊಂದಿಗಿನ ಸಂಬಂಧ ಸಾಕಾಗದ ಆತ ವಿಧವೆ ಶಿಕ್ಷಕರಿಯೊಬ್ಬರ ಅಕ್ರಮ ಸಂಬಂಧದ ಬಲೆಗೆ ಬಿದ್ದಿದ್ದಾನೆ. ಮೊದ ಮೊದಲು ಸ್ನೇಹದ ರೂಪದಲ್ಲಿ ಆರಂಭವಾದ ಅವರ ಸಂಬಂಧ ಕೊನೆಗೆ ಸಾಕಷ್ಟು ಆಳವಾಗಿ ಬೇರೂರಿದೆ.
ಈ ಮಧ್ಯೆ ಶಿಕ್ಷಕಿ ತನ್ನ ಕೆಲಸ ಕಳೆದುಕೊಂಡಿದ್ದಾಳೆ. ಹಣಕ್ಕೆ ಸಾಕಷ್ಟು ತೊಂದರೆಯಾಗಿದೆ. ಆಗ ಉಪಾಯ ಮಾಡಿದ ಆಕೆ ಪ್ರಭುದಾಸ್​ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ನಾನು ಮನೆ ತೆಗೆದುಕೊಳ್ಳಬೇಕು, ನನಗೆ ಹಣ ಕೊಡು ಎಂದು ಕೇಳಿದ್ದಾಳೆ. ಆದರೆ ತನ್ನ ಬಳಿ ಹಣವಿಲ್ಲವೆಂದು ಆತ ಹೇಳಿದಾಗ, ಅವರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದಾಳೆ.
ಶಿಕ್ಷಕಿಯ ಬೆದರಿಕೆಗೆ ಹೆದರಿದ ಪ್ರಭುದಾಸ್ ಆಕೆಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಂದೇಶ ಕಳುಹಿಸಿ ಮೇ 16ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತನ ಹೆಂಡತಿ ಗಂಡನ ಸಾವಿಗೆ ಶಿಕ್ಷಕಿಯೇ ಕಾರಣವೆಂದು ಪೊಲೀಸರಲ್ಲಿ ದೂರು ನೀಡಿದ್ದಾಳೆ. ಶಿಕ್ಷಕಿಗೆ ಅನೇಕರು ಸಾಥ್​ ಕೊಟ್ಟಿದ್ದಾಗಿಯೂ ಹೇಳಲಾಗಿದೆ. ಇದೀಗ ಪೊಲೀಸರು ಆರೋಪಿತ ಶಿಕ್ಷಕಿಯನ್ನು ವಶಕ್ಕೆ ಪಡೆದಿದ್ದಾರೆ. (ಏಜೆನ್ಸೀಸ್​)
ಜಾರಕಿಹೊಳಿ ಸಿಡಿ ಪ್ರಕರಣ: ನರೇಶ್, ಶ್ರವಣ್​ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮುಂದಾದ ಎಸ್​ಐಟಿ

ಎಸ್​ಪಿ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿಗೆ ಮುಂದಾದ ಗ್ಯಾಂಗ್​! ಥಳಿಸಿ, ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − thirteen =
Remember me
