ಭೋಪಾಲ್​:ಕೆಲವರು ಮದುವೆಯಾದ ನಂತರವೂ ವಿವಾಹೇತರ ಸಂಬಂಧವನ್ನೂ ಹೊಂದುವ ಮೂಲಕ ತಮ್ಮ ಸುಂದರವಾದ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಾರೆ. ಅನೈತಿಕ ಸಂಬಂಧವೂ ಅನೇಕರ ಜೀವನ ಕೆಡೆಸಿದ್ದು, ಕೆಲವೊಮ್ಮೆ ಈ ವಿಚಾರಗಳಿಗೆ ಕೊಲೆಗಳು ಸಹ ನಡೆದಿವೆ. ಇದೀಗ ಇದಕ್ಕೆ ಪೂರಕವೆಂಬಂತೆ ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಪತಿಯ ಕೈಗೆ ಸಿಕ್ಕಿಬಿದ್ದು ಕೊಲೆಯಾಗಿರುವ ಘಟನೆ ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ಖತಿ ಬಾಬಾ ಕಾಲೋನಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಆರೋಪಿ ರವಿ ವಂಶಕರ್​ ಎಂಬಾತ ಪೊಲೀಸರಿಗೆ ಶರಣಾಗಿದ್ದು, ಮೃತರನ್ನು ಪೂಜಾ ಹಾಗೂ ರವಿ ಎಂದು ಗುರುತಿಸಲಾಗಿದೆ. ತನ್ನ ಪತ್ನಿ ಹಾಗೂ ಪ್ರಿಯಕರನ ಹತ್ಯೆಗೆ ಬಳಸಲಾಗಿದ್ದ ಕೊಡಲಿಯನ್ನು ಆರೋಪಿ ಪೊಲೀಸರಿಗೆ ಒಪ್ಪಿಸಿದ್ದಾನೆ. ಘಟನೆ ಸಂಬಂಧ ಸ್ಥಳ ಮಹಜರು ನಡೆಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ರವಿ ವೃತ್ತಿಯಲ್ಲಿ ಚಾಲಕನಾಗಿದ್ದು, ಖತಿ ಬಾಬಾ ಕಾಲೋನಿಯಲ್ಲಿ ತನ್ನ ಪತ್ನಿಯೊಂದಿಗೆ ವಾಸವಿದ್ದ. ತನ್ನ ಪತ್ನಿಯ ನಡವಳಿಕೆ ಬಗ್ಗೆ ಸಂಶಯಗೊಂಡಿದ್ದ ರವಿ ಆಕೆಯ ಚಲನವಲನಗಳ ಮೇಲೆ ನಿಗಾ ಇರಿಸಿದ್ದ. ಅದರಂತೆ ಶುಕ್ರವಾರ ರವಿ ಪತ್ನಿ ಪೂಜಾ ತರಕಾರಿ ತರುವಂತೆ ಹೇಳಿ ಗಂಡನನ್ನು ಕಳುಹಿಸಿ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಾಳೆ.
ಇದನ್ನೂ ಓದಿ:ಸಿನಿಮಾ ಪ್ರಮೋಷನ್​ ವೇಳೆ ಮದುವೆ ಕುರಿತು ಪ್ರಶ್ನೆ; ನಟಿ ಶ್ರದ್ಧಾ ಖಡಕ್ ರಿಪ್ಲೈಗೆ ಸುಸ್ತಾದ ಪಾಪರಾಜಿಗಳು
ಪತ್ನಿಯ ನಡವಳಿಕೆ ಬಗ್ಗೆ ಅನುಮಾನ ಹೊಂದಿದ್ದ ರವಿ ಮನೆಗೆ ಹಿಂತಿರುಗಿ ಹೋಗಿ ನೋಡಿದಾಗ ಆಕೆ ಪ್ರಿಯಕರನ ಜೊತೆ ರೂಮಿನಲ್ಲಿರುವುದನ್ನು ಕಂಡು ಕುಪಿತಗೊಂಡು ಬಾಗಿಲು ತೆರೆಯುವಂತೆ ಹೇಳಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಸಿಟ್ಟಿಗೆದ್ದ ಆತ ಕೈಯಲ್ಲಿ ಕೊಡಲಿ ಹಿಡಿದು ಬಾಗಿಲು ತೆರೆಯುವಂತೆ ಕೂಗಾಡಿದ್ದಾನೆ. ಆ ಬಳಿಕ ಪೂಜಾಳ ಪ್ರಿಯಕರ ಬಾಗಿಲು ತೆರೆದಾಗ ರವಿ ಕೊಡಲಿಯಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತಿಯ ಆರ್ಭಟ ಕಂಡು ಎಸ್ಕೇಪ್​ ಆಗಲು ಯತ್ನಿಸಿದ ಪತ್ನಿಯನ್ನು ರವಿ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಪತ್ನಿ ಹಾಗೂ ಆಕೆಯ ಪ್ರಿಯಕರ ಮನೆಯ ಕಾಂಪೌಂಡ್​ನಲ್ಲೇ ಪ್ರಾಣ ಬಿಟ್ಟಿದ್ದಾರೆ.
ಬಳಿಕ ಆರೋಪಿಯು ಹತ್ಯೆಗೆ ಬಳಸಿದ್ದ ಕೊಡಲಿ ಸಮೇತ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದು, ನಡೆದ ಘಟನೆ ಬಗ್ಗೆ ಹೇಳಿ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 3 =
Remember me
