ಹೈದರಾಬಾದ್​:ಮದುವೆ ಮಾಡಿಸಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, 45 ವರ್ಷದ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯ ನಿವಾಸಿಯಾದ 45 ವರ್ಷದ ಮಹಿಳೆ ಹಾಗೂ ಆಕೆಯ ಮಗನ ನಡುವೆ ಪ್ರತಿನಿತ್ಯ ಮದುವೆ ಮಾಡಿಸುವ ವಿಚಾರವಾಗಿ ಗಲಾಟೆಯಾಗುತ್ತಿತ್ತು ಎಂದು ಹೇಳಲಾಗಿದೆ. ತನಗೆ ಹೆಣ್ಣು ಹುಡುಕಲಿಲ್ಲ ಎಂದು ಆರೋಪಿ ತನ್ನ ತಾಯಿಯ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ:‘ದಿ ಕಾಶ್ಮೀರ ಫೈಲ್ಸ್​’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ
ಆಗಸ್ಟ್​ 24ರಂದು ಇದೇ ವಿಚಾರವಾಗಿ ತಾಯಿ ಹಾಗೂ ಮಗನ ನಡುವೆ ಗಲಾಟೆಯಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆತ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಈ ವಿಚಾರವನ್ನು ತನ್ನ ಸಂಬಂಧಿ ಬಳಿ ಹೇಳಿಕೊಂಡಿದ್ದು, ಜನರ ದಾರಿ ತಪ್ಪಿಸಲು ಆರೋಪಿಗಳಿಬ್ಬರು ಮಹಿಳೆಯ ತಲೆಯನ್ನು ಇಟ್ಟಿಗೆಯಿಂದ ಜಜ್ಜಿ, ಕೈ ಕಾಲುಗಳನ್ನು ಮೃತದೇಹದಿಂದ ಬೇರ್ಪಡಿಸಿದ್ದಾರೆ.
ಇದಾದ ಕೆಲ ಹೊತ್ತಿನ ಬಳಿಕ ಆರೋಪಿ ತನ್ನ ಸಹೋದರಿಗೆ ವಿಚಾರ ತಿಳಿಸಿದ್ದು, ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್​​ ಅಧಿಕಾರಿಗಳು ಶಂಕೆಯ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾರೆ. ಪ್ರಕರಣದ ದಿಕ್ಕು ತಪ್ಪಿಸುವ ಸಲುವಾಗಿ ಮೃತದೇಹವನ್ನು ವಿಕಾರಗೊಳಿಸಲಾಯಿತೆಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
ಮಹಿಳೆಯ ಮಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಿದ್ದಪಡಿಸಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
