ಮುಂಬೈ:ಮದುವೆಯಾಗಿ ಹಲವು ವರ್ಷಗಳು ಕಳೆದರೂ ಮಗು ಆಗಲಿಲ್ಲ ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಚುಚ್ಚಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಘಟನೆ ಭಾನುವಾರ ಸಂಜೆ ನಡೆದಿದ್ದು ಪ್ರಕರಣ ಸಂಬಂಧ ಆರೋಪಿ ಪತಿ(37 ವರ್ಷ)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ(35 ವರ್ಷ) ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಚೆನ್ನೈ vs ಗುಜರಾತ್ ಫೈನಲ್ ಪಂದ್ಯ ಮುಂದೂಡಿಕೆ; ರಾತ್ರಿಯಿಡಿ ರಸ್ತೆಯಲ್ಲಿ ಕಾಲಕಳೆದ ಸಿಎಸ್​ಕೆ ಫ್ಯಾನ್ಸ್​
ಆರ್ಡನೆನ್ಸ್​​ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಬಂಧಿತ ಆರೋಪಿಯೂ ಆಗಾಗ ತನ್ನ ಪತ್ನಿ ಗರ್ಭಿಣಿ ಆಗಲಿಲ್ಲ ಎಂಬ ಕಾರಣಕ್ಕೆ ಜಗಳವಾಡುತ್ತಿದ್ದ. ಭಾನುವಾರ ಇದೇ ವಿಚಾರಕ್ಕೆ ದಂಪತಿಗಳ ನಡುವೆ ಪುನಃ ಗಲಾಟೆಯಾಗಿದ್ದು ಚೂಪಾದ ಆಯುಧದಿಂದ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ತೀವ್ರವಾವಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಘಟನೆಯ ಕುರಿತು ಫ್ಯಾಕ್ಟರಿ ನೌಕರರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twenty =
Remember me
