ಜೈಪುರ:ಊಟ ಬಡಿಸಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಘಟನೆಯೂ ರಾವತ್​ ನಗರದ ಮಾತಾ ಕಾ ತನ್​ ಎಂಬ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯೂ ಕೊಲೆ ಮಾಡಿದ ನಂತರ ಶವದ ಜೊತೆ ರಾತ್ರಿಯಿಡಿ ಕಳೆದಿದ್ದಾನೆ.
ಮೃತರನ್ನು ಸುಮನ್​ ಬೆನಿವಾಲ್​ ಎಂದು ಗುರುತಿಸಲಾಗಿದ್ದು, ಈಕೆಯ ಪತಿ ರಮೇಶ್​ ಬೆನಿವಾಲ್​ನನ್ನು(35) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೂರ್ವ ಡಿಸಿಪಿ ಅಮ್ರಿತಾ ದುಹಾನ್​ ರಮೇಶ್​ ಹಾಗೂ ಸುಮನ್​ ಜೋಡಿಗೆ 15 ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಯ ಮಕ್ಕಳಿಬ್ಬರನ್ನು ಹಾಸ್ಟೆಲ್​ನಲ್ಲಿ ಬಿಡಲಾಗಿತ್ತು. ಶನಿವಾರ ರಮೇಶ್​ ಹಾಗೂ ಸುಮನ್​ ನಡುವೆ ಉಟ ಬಡಿಸಲಿಲ್ಲ ಎಂಬ ಕಾರಣಕ್ಕೆ ಗಲಾಟೆಯಾಗಿದೆ.
ಇದನ್ನೂ ಓದಿ:ವರುಣನ ಆರ್ಭಟಕ್ಕೆ ತತ್ತರಿಸಿದ ಗುಜರಾತ್​; ಪ್ರವಾಹದಲ್ಲಿ ಕೊಚ್ಚಿಹೋದ ವಾಹನ, ಜಾನುವಾರುಗಳು
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ರಮೇಶ್​ ಸುಮನ್​ ತಲೆಗೆ ಕಲ್ಲಿನಿಂದ ಹೊಡೆದಿದ್ದು, ಬಳಿಕ ಆಕೆಯನ್ನು ಜಜ್ಜಿ ಕೊಲೆ ಮಾಡಿದ್ದಾನೆ. ಬಳಿಕ ಈ ವಿಚಾರವನ್ನು ಪತ್ನಿಯ ಸಹೋದರನಿಗೆ ಕರೆ ಮಾಡಿ ತಿಳಿಸಿ ಶವದ ಜೊತೆ ರಾತ್ರಿಯಿಡಿ ಕಳೆದಿದ್ದಾನೆ.
ಸಹೋದರಿಯನ್ನು ಕೊಂದ ವಿಚಾರ ತಿಳಿದ ಆಕೆಯ ಸಹೋದರ ಕೂಡಲೇ ಪೊಲೀಸ್​ ಅಧಿಕಾರಿಗಳಿಗೆ ಮಾಹಿತಿ ನೀಡಿದ್ಧಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿ ಹಾಗೂ ಕೊಲೆ ಮಾಡಿದ ಆಯುಧವನ್ನು ವಶಕ್ಕೆ ಪಡೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೂರ್ವ ಡಿಸಿಪಿ ಅಮ್ರಿತಾ ದುಹಾನ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
