ಅಮೃತಸರ:ದೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳೂ ಹೆಚ್ಚುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರಗಳೂ ಕಾನೂನುಗಳನ್ನೂ ಜಾರಿಗೆ ತಂದರೂ ಯಾವುದೇ ಪ್ರಯೋಜನವಾಗದೆ ಇರುವುದು ಬೇಸರದ ಸಂಗತಿಯಾಗಿದೆ.
ಇದೀಗ ಪ್ರಕರಣ ಒಂದರಲ್ಲಿ ವ್ಯಕ್ತಿಯೋರ್ವ ಜನನಿಬಿಡ ಪ್ರದೇಶದಲ್ಲಿ ತನ್ನ ಪತ್ನಿಯನ್ನ ಕೊಚ್ಚಿ ಕೊಲೆ ಮಾಡಿದ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಂಜಾಬಿನ ಸಂಗ್ರೂರ್​ ಜಿಲ್ಲೆಯಲ್ಲಿ ನಡೆದಿದೆ.
ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
A man attacked his wife with an sharp edge weapon in broad daylight at market area of Sunam,#Sangrur. Later the accused also attempted suicide.pic.twitter.com/qi5UdiNy2y
ಇದನ್ನೂ ಓದಿ:ಕವಾಡಿಗರಹಟ್ಟಿ ವಿಷಜಲ ಪ್ರಕರಣ; ಮೃತರ ಸಂಖ್ಯೆ ಆರಕ್ಕೆ ಏರಿಕೆ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಸಂಗ್ರೂರ್​ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ದಾಂಪತ್ಯ ಕಲಹದಿಂದಾಗಿ ದಂಪತಿಗಳಿಬ್ಬರು ಪರಸ್ಪರ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಅದರ ವಿಚಾರಣೆಯೂ ಸಹ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಡೈವರ್ಸ್​​ ವಿಚಾರವಾಗಿ ತನ್ನ ಹೆಂಡತಿಯ ಮೇಲೆ ಕುಪಿತಗೊಂಡಿದ್ದ ವ್ಯಕ್ತಿ ಸಿಟ್ಟಿನಿಂದ ಕೊಲೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸಂಗ್ರೂರ್​ನ ಸುನಮ್​ ಮಾರುಕಟ್ಟೆ ಪ್ರದೇಶದಲ್ಲಿ ಆರೋಪಿ ತನ್ನ ಹೆಂಡತಿಯನ್ನು ನೋಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಆತ ಅಲ್ಲೇ ತರಕಾರಿ ಅಂಗಡಿಯೊಂದರಲ್ಲಿ ಇದ್ದ ಮಚ್ಚಿನಿಂದ ಆಕೆಯ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾನೆ. ಇದನ್ನೂ ಗಮನಿಸಿದ ಸ್ಥಳೀಯರೂ ಕೂಡಲೇ ಆತನನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಲೂಲು ಮುಂದಾಗಿದ್ದಾರೆ.
ಇದರಿಂದ ಭಯಬಿದ್ದ ಆತ ತಕ್ಷಣವೇ ವಿಷವನ್ನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರೂ ಆತನನ್ನೂ ಆಸ್ಪತ್ರೆಗೆ ದಾಖಲಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಂಗ್ರೂರ್​ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + fifteen =
Remember me
