ಆಗ್ರಾ:ಐಆರ್‌ಸಿಟಿಸಿ ವೆಬ್‌ಸೈಟ್ ಹ್ಯಾಕ್ ಮಾಡಿ, ನಕಲಿ ಹೆಸರಿನಲ್ಲಿ ತತ್ಕಾಲ್ ಟಿಕೆಟ್ ಕಾಯ್ದಿರಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್​ ಖದೀಮನನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ.
ಆರೋಪಿಯನ್ನು ಉತ್ತರ ಪ್ರದೇಶದ ದಾದ್ರಿ ಮೂಲದ ಮೊಯಿನುದ್ದೀನ್ ಚಿಸ್ತಿ ಎಂದು ಗುರುತಿಸಲಾಗಿದ್ದು, ಗ್ರೇಟರ್ ನೋಯ್ಡಾದ ಅಯೋಧ್ಯಾ ಗಂಜ್‌ನಲ್ಲಿ ಟಿಕೆಟ್ ಬುಕಿಂಗ್ ಅಂಗಡಿ ನಡೆಸುತ್ತಿದ್ದನು. IRCTC ವೆಬ್‌ಸೈಟ್​​ನ್ನು ಹ್ಯಾಕ್ ಮಾಡಿ ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸುವುದು ಸೇರಿದಂತೆ ಟಿಕೆಟ್ ಬುಕಿಂಗ್‌ಗೆ ಅನಧಿಕೃತ ಸಾಫ್ಟ್‌ವೇರ್‌ ಬಳಸಿ ತತ್ಕಾಲ್ ಕೋಟಾದಡಿ ರೈಲು ಟಿಕೆಟ್‌ಗಳನ್ನು ಇತರರಿಗಿಂತ ವೇಗವಾಗಿ ಪಡೆದು, ಅವುಗಳನ್ನು ದುಬಾರಿ ಬೆಲೆ ಮಾರಾಟ ಮಾಡುತ್ತಿದ್ದನು.
ಇದನ್ನೂ ಓದಿ:ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಮೃತದೇಹವನ್ನು ಎಳೆದೊಯ್ದ ಮಾನಸಿಕ ಅಸ್ವಸ್ಥ..
ಒಂದೇ ಮೊಬೈಲ್ ಸಂಖ್ಯೆಯಿಂದ ಹೆಚ್ಚಿನ ಸಂಖ್ಯೆಯ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿರುವುದನ್ನು ದೆಹಲಿ ಸೈಬರ್ ಕ್ರೈಮ್ ಘಟಕ ಪತ್ತೆ ಮಾಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈತನಿಂದ ಲ್ಯಾಪ್ ಟಾಪ್, ಮೊಬೈಲ್ ಫೋನ್, ಪ್ರಿಂಟರ್, 88 ಟಿಕೆಟ್ ಹಾಗೂ 1.55 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು 1989ರ ಭಾರತೀಯ ಗೃಹ ರೈಲ್ವೆ ಕಾಯಿದೆಯನ್ನು ಉಲ್ಲಂಘಿಸಿದ್ದು, ಈ ನಿಯಮದ ಪ್ರಕಾರ ನಕಲಿ ಹೆಸರಿನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡುವುದನ್ನು ನಿಷೇಧಿಸುತ್ತದೆ. ಆರೋಪಿಯು ಎರಡು ವರ್ಷದಲ್ಲಿ 30 ಲಕ್ಷ ರೂ.ವರೆಗೆ ವಂಚನೆ ಮಾಡಿರುವುದು ಪತ್ತೆಯಾಗಿದ್ದು, ಇಂತಹ ವಂಚನೆಗಳನ್ನು ತಡೆಗಟ್ಟಲು ಆಫ್‌ಲೈನ್ ಮತ್ತು ಅಧಿಕೃತ IRCTC ವೆಬ್‌ಸೈಟ್, ಅಪ್ಲಿಕೇಶನ್ ಮತ್ತು ನೋಂದಾಯಿತ ಏಜೆಂಟ್‌ಗಳ ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡಲು ಸೂಚಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
