ತಿರುವನಂತಪುರಂ:ಕೇರಳದ ಚರ್ಚ್​ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ದಾನೆ.
ಆರೋಪಿಯು ತ್ರಿಶೂರ್​ ಗ್ರಾಮಾಂತರದ ಕೊಡಕ್ರಾ ಪೊಲೀಸ್​ ಠಾಣೆಗೆ ಶರಣಾಗಿದ್ದು, ಆರೋಪಿಯ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| On the blast at Zamra International Convention & Exhibition Centre, Kalamassery, Kerala ADGP (law and order) MR Ajith Kumar, says "One person has surrendered in Kodakra Police Station, in Thrissur Rural, claiming that he has done it. His name is Dominic Martin and he…pic.twitter.com/q59H7TaQC7
ಇದನ್ನೂ ಓದಿ:ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸ್ಪೋಟಕ್ಕೆ IED ಬಳಕೆ: ಡಿಜಿಪಿ
ಈ ಕುರಿತು ಪ್ರತಿಕ್ತಿಯಿಸಿರುವ ಕೇರಳ ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಜಿತ್ ಕುಮಾರ್, ಘಟನೆಗೆ ಸಂಬಂಧಿಸಿದಂತೆ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ಆತ ಕ್ರಿಶ್ಚಿಯನ್​ ಧಾರ್ಮಿಕ ಗುಂಪಿಗೆ ಸೇರಿದವನು ಎಂದು ಹೇಳಿಕೊಂಡಿದ್ದು, ಆತನ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಯುತ್ತಿದ್ದು ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸ್ಫೋಟದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, 40ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಪೈಕಿ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
