ಮಧ್ಯಪ್ರದೇಶ:ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಬಡ ಕಾರ್ಮಿಕನ ಮೇಲೆ ಮೂತ್ರ ವಿಸರ್ಜಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ಇದೀಗ ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ:ಮದುವೆ ಮನೆಯಲ್ಲಿ ಊಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಬುಡಕಟ್ಟು ಜನಾಂಗದ ಕೂಲಿ ಕಾರ್ಮಿಕನ ಮೇಲೆ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋ ವ್ಯಾಪಕವಾಗಿ ವೈರಲ್ ಆದ ಬೆನ್ನಲ್ಲೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಡಿಯೋವನ್ನು ಗಮನಿಸಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹಾಕಬೇಕು ಎಂದು ಆದೇಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿದ ಅವರು, “ಸಿಧಿ ಜಿಲ್ಲೆಯಲ್ಲಿ ನಡೆದ ಘಟನೆಯ ವೈರಲ್ ವೀಡಿಯೋ ನನ್ನ ಗಮನಕ್ಕೆ ಬಂದಿದೆ. ಅಪರಾಧಿಯನ್ನು ಬಂಧಿಸಲು ಮತ್ತು ಕಠಿಣ ಕ್ರಮ ಕೈಗೊಳ್ಳಲು ಮತ್ತು ಎನ್‌ಎಸ್‌ಎ ವಿಧಿಸಲು ನಾನು ಆಡಳಿತಕ್ಕೆ ಸೂಚನೆ ನೀಡಿದ್ದೇನೆ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
