ಕೂಚ್​​ಬೆಹರ್:ಮತದಾನದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮತಪೆಟ್ಟಿಗೆಯೊಂದಿಗೆ ಓಡಿ ಹೋಗಿರುವ ವಿಚಿತ್ರ ಘಟನೆ ಪಶ್ಚಿಮ ಬಂಗಾಳದ ಕೂಚ್​​ಬೆಹರ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಶೀಘ್ರವೇ ಸಿಎಂ ಬದಲಾವಣೆ ಎಂದ ಆದಿತ್ಯ ಠಾಕ್ರೆ
ಪಂಚಾಯತ್ ಚುನಾವಣೆಯ ಮತದಾನ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದ್ದು, ಇದು ಚುನಾವಣೆಯ ಸಮಗ್ರತೆ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಕಳವಳ ಮೂಡಿಸಿದೆ. ವ್ಯಕ್ತಿಯೊಬ್ಬ ಮತಪೆಟ್ಟಿಗೆಯೊಂದಿಗೆ ಓಡಿ ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವ್ಯಕ್ತಿ ಬಿಜೆಪಿಗೆ ಸೇರಿದ್ದಾನೆ ಎಂದು ಟಿಎಂಸಿ ಆರೋಪಿಸಿದ್ದರೂ, ಈ ಕುರಿತು ಯಾವುದೇ ದೃಢೀಕರಣವನ್ನು ಬಿಜೆಪಿ ನೀಡಿಲ್ಲ.
Man runs away with ballot box in Bengal’s Cooch Behar.#WestBengal#WestBengalPanchayatPollspic.twitter.com/3NZcUktPHJ
— Rajdeep Bailung Baruah (@BailungRajdeep)July 8, 2023

ಅಲ್ಲದೇ, ದಿನ್‌ಹಟಾದ ಬರನಾಚಿನಾ ಎಂಬಲ್ಲಿನ ಮತಗಟ್ಟೆಯಲ್ಲಿ ನಕಲಿ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ, ಮತದಾರರು ಆಕ್ರೋಶ ವ್ಯಕ್ತಪಡಿಸಿ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಪಂಚಾಯತ್​ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸುಮಾರು 5.67 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಆದರೆ, ಚುನಾವಣೆ ಆರಂಭವಾದ ಬೆನ್ನಲ್ಲೇ ರಾಜ್ಯಾದ್ಯಂತ ಹಿಂಸಾಚಾರ ನಡೆದಿದ್ದು, ಪಂಚಾಯತ್​ ಚುನಾವಣೆ ವೇಳೆ ನಡೆದ ಹಿಂಸಾಚಾರಕ್ಕೆ ಈಗಾಗಲೇ 9 ಜನರು ಮೃತಪಟ್ಟಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
