ಗುರುಗ್ರಾಮ:ಸಾಮಾನ್ಯವಾಗಿ ನಾವು ಪಟಾಕಿಗಳನ್ನು ಹಬ್ಬ ಹರಿದಿಮನ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಸಿಡಿಸುತ್ತೇವೆ. ಆದರೆ, ಘಟನೆಯೊಂದರಲ್ಲಿ ಕೆಲವು ವ್ಯಕ್ತಿಗಳು ಪಟಾಕಿಯನ್ನು ಚಲಿಸುವ ಕಾರಿನ ಮೇಲೆ ಸಿಡಿಸಿ ಹುಚ್ಚಾಟ ಮೆರೆದಿರುವ ಘಟನೆ ನವದೆಹಲಿಯ ಗುರುಗ್ರಾಮದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಿದ್ದಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಕಪ್ಪು ಬಣ್ಣದ ಎಸ್​ಯುವಿಯ ಬಾನೆಟ್/ಮೇಲ್ಭಾಗದಲ್ಲಿ ಪಟಾಕಿಗಳನ್ನು ಹಚ್ಚಿ ಇಡಲಾಗಿದ್ದು, ಮೆಟ್ರೋ ಪಿಲ್ಲರ್​ನಡಿ ಯುವಕರ ಗುಂಪೊಂದು ತಮ್ಮ ಇಷ್ಟದಂತೆ ಅಡಾದಿಡ್ಡಿಯಾಗಿ ವಾಹನವನ್ನು ಚಲಾಯಿಸುತ್ತಾರೆ. ಈ ವೇಳೆ ಕಾರಿನಲ್ಲಿರುವ ವ್ಯಕ್ತಿಯೋರ್ವ ಬಾಗಿಲನ್ನು ತೆಗೆದು ಫುಟ್​ಸ್ಟೆಪ್​ ಮೇಲೆ ನಿಂತು ಜೋರಾಗಿ ಕೂಗಾಡುತ್ತಿರುವುದನ್ನು ನೋಡಬಹುದಾಗಿದೆ.
Unidentified persons booked for bursting crackers from their car:#GurugramPolice.#Viralvideopic.twitter.com/MocAcsvlUx
ಇದನ್ನೂ ಓದಿ:ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಘಟನೆಯು ಗುರುಗ್ರಾಮದ ಗಾಲ್ಫ್​ ರಸ್ತೆಯಲ್ಲಿ ನಡೆದಿದ್ದು, ಪೊಲೀಸರು ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚುವುದಾಗಿ ತಿಳಿಸಿದ್ದಾರೆ. ಆದರೆ, ಆರೋಪಿಗಳು ಕಾರಿನ ನಂಬರ್​ಪ್ಲೇಟ್​ ತೆಗೆದಿದ್ದು, ಅವರನ್ನು ಹಿಡಿಯುವುದು ಮತ್ತಷ್ಟು ಕಷ್ಟವಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ವರ್ಷ ಗುರುಗ್ರಾಮದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು, ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಇದೀಗ ಮತ್ತೊಮ್ಮೆ ಇದೇ ರೀತಿಯ ಘಟನೆ ನಡೆದಿದ್ದು, ಪೊಲೀಸರು ಯಾವ ರೀತಿಯ ಕ್ರಮಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
