ಜೈಪುರ:ಇತ್ತೀಚೆಗೆ ಸಣ್ಣ-ಪುಟ್ಟ ವಿಚಾರಗಳು ಕೊಲೆ, ಗಲಾಟೆ ಮತ್ತು ಹಲ್ಲೆ ಮಾಡುವ ಹಂತಕ್ಕೆ ಹೋಗುತ್ತದೆ. ಹೀಗೆ ಇಲ್ಲೊಬ್ಬ ಜಮೀನಿನಲ್ಲಿ ಮಣ್ಣು ತೆಗೆಯುವುದನ್ನು ಪ್ರಶ್ನಿಸಿದ್ದಕ್ಕೆ ತನ್ನ ಸೋದರಳಿಯನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಘಟನೆ ರಾಜಸ್ಥಾನದ ಅಜ್ಮೀರ್ ಜಲ್ಲೆಯ ಬೇವಾರ್‌ನಲ್ಲಿ ನಡೆದಿದೆ.
ಹಮೀದ್‍ ಗುಂಡೆಟು ತಿಂದ ಸಂತ್ರಸ್ತ. ಆರೋಪಿಯನ್ನು ಭ್ಗಾಗ ಎಂದು ಗುರುತಿಸಲಾಗಿದೆ. ಆರೋಪಿ ಭ್ಗಾಗ ಸೋದರಳಿಯ ಹಮೀದ್‍ನ ಜಮೀನಿನಲ್ಲಿ ಮಣ್ಣು ತೆಗೆಯುತ್ತಿದ್ದ. ಇದನ್ನು ಪ್ರಶ್ನಿಸಿದ ಸೋದರಳಿಯನ ಮೇಲೆ ಭ್ಗಾಗ ತನ್ನ ಬಳಿ ಇದ್ದ ಡಬಲ್ ಬ್ಯಾರೆಲ್ ರೈಫಲ್‍ನಿಂದ ಗುಂಡು ಹಾರಿಸಿದ್ದಾನೆ. ತಕ್ಷಣವೇ ಗಾಯಗೊಂಡಿದ್ದ ಹಮೀದ್‍ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:7.9ಲಕ್ಷ ರೂ. ಖರ್ಚು ಮಾಡಿ ವಿಶ್ವದಲ್ಲೇ ಅತಿ ದೊಡ್ಡ ತುಟಿ ಪಡೆದ ಯುವತಿ!
ಗುಂಡು ಹಾರಿಸುವ ದೃಶ್ಯವನ್ನು ಸಂತ್ರಸ್ತನೇ ಸೆರೆಹಿಡಿದಿದ್ದು, ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ ಯುವಕ ಇಂದು ಡಿಸಿ ಕಾರು ಚಾಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
