ಉತ್ತರಪ್ರದೇಶ:ಸೋದರ ಸಂಬಂಧಿಯನ್ನು ಪ್ರೀತಿಸುತ್ತಿದ್ದ ಯುವಕ, ಯಾರಿಗೂ ತಿಳಿಸದೆ ವಿವಾಹವಾಗಿದ್ದ, ಈ ಸಂಗತಿಯನ್ನು ಕುಟುಂಬದವರು ಒಪ್ಪದ ಹಿನ್ನಲೆ ಗುಂಡು ಹಾರಿಸಿಕೊಂಡು ಸಾವಿಗೀಡಾಗಿರುವ ಘಟನೆ ಉತ್ತರಪ್ರದೇಶದ ರಾಜೇಸುಲ್ತಾನ್‌ಪುರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಬೂವನಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಚಾಲನೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಸ್ಥಳೀಯರನ್ನು ಬೆಚ್ಚಿ ಬೀಳಿಸಿದ್ದು, ಮೃತ ವ್ಯಕ್ತಿಯನ್ನು ಇಟೌಲಿ ಖುರ್ದ್ ನಿವಾಸಿ ಸಂದೀಪ್ (30) ಎಂದು ಗುರುತಿಸಲಾಗಿದೆ. ತನ್ನ ಚಿಕ್ಕಮ್ಮನ ಮಗಳನ್ನು ಪ್ರೀತಿಸಿ, ರಹಸ್ಯವಾಗಿ ಮದುವೆಯಾಗಿದ್ದ ಎನ್ನಲಾಗಿದ್ದು, ನಂತರ ಆಕೆಯ ಮನೆಗೆ ಭೇಟಿ ನೀಡಿ, ಆಕೆಯನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾನೆ. ಇದಕ್ಕೆ ಸಂಬಂಧಿಕರು ನಿರಾಕರಿಸಿದ್ದಕ್ಕೆ ಮನನೊಂದ ಆತ, ತಾನು ತಂದಿದ್ದ ಅಕ್ರಮ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ, ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹದಲ್ಲಿ ಡಾ.ಕೆ.ಸಿ.ನಾಕ್ ಅಭಿಮತ
ಕೂಡಲೇ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವನ್ನಪ್ಪುವ ಕೆಲವು ಗಂಟೆಗಳ ಮುನ್ನ ಸಂದೀಪ್ ತನ್ನ ಮದುವೆಯ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಬಿದ್ದು ಗಾಯಗೊಂಡ ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen − 6 =
Remember me
