ಲಖನೌ:ತನ್ನ ಮಗಳನ್ನು ಭುಜದ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಶಹಜಹನ್​ಪುರ ಜಿಲ್ಲೆಯಲ್ಲಿ ನಡೆದಿದೆ.
ಮೊಹಮ್ಮದ್​ ಶೋಯೆಬ್​(28) ಗುಂಡೇಟು ತಿಂದು ಗಂಭಿರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಕಜನಕ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ.
Such incidents are really a challenge for@Uppolicefor maintaining law and order situation. A man was shot at by three bike borne persons in Kotwali area of UP's Shahjahanpur. Victim Mohd Shoib is critical at a hospital.CCTV of the incidentWarning: disturbing visualspic.twitter.com/vmHG2fswEI
ಇದನ್ನೂ ಓದಿ:ಅಕ್ರಮ ಆಸ್ತಿ ಗಳಿಕೆ, ಭ್ರಷ್ಟಾಚಾರ ಪ್ರಕರಣದಲ್ಲಿ ಅಜಿತ್​ ಕುಮಾರ್​ ರೈಗೆ ಜಾಮೀನು ಮಂಜೂರು
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಮೊಹಮ್ಮದ್​ ಶೋಯೆಬ್ ತನ್ನ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಗುಂಡು ಹಾರಿಸಿ ಪರಾರಿಯಾಗುತ್ತಾರೆ. ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಶೋಯೆಬ್ ಹಾಗೂ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಹಜಹನ್​ಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಮೀನಾ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಮೀನಾ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
