ನವದೆಹಲಿ:ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ಟೀಮ್​ ಇಂಡಿಯಾ ಭರ್ಜರಿ ಜಯಗಳಿಸಿದ್ದು, ದಕ್ಷಿಣ ಆಫ್ರಿಕಾದ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲಬೇಕೆಂಬ ಆಸೆ ಭಗ್ನಗೊಂಡಿದೆ. 17 ವರ್ಷಗಳ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಗೆಲುವು ಕಂಡಿರುವುದು ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ವಿಮಾನಗಳಲ್ಲೂ ಸಂಭ್ರಮಿಸಲಾಗಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಂಭ್ರಮಾಚರಣೆ ವೇಳೆ ವ್ಯಕ್ತಿಯೋರ್ವ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.
The exact moment at 30,000 feet the Captain announced we had won the World Cup. On cloud nine indeed!pic.twitter.com/9fLdsDUlRF
ಇದನ್ನೂ ಓದಿ:ಬರ್ತ್​ಡೇ ಗಿಫ್ಟ್​ಗಾಗಿ ಥ್ಯಾಂಕ್ಸ್​; ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ಟೀಮ್​ ಇಂಡಿಯಾಗೆ ವಿಭಿನ್ನವಾಗಿ ಶುಭಕೋರಿದ ಧೋನಿ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ, ವಿಮಾನದಲ್ಲಿ ಪ್ರಯಾಣಿಸುವಾಗ ಪೈಲಟ್​ ಟಿ20 ವಿಶ್ವಕಪ್​ನಲ್ಲಿ ಭಾರತ ಫೈನಲ್​ ಗೆದ್ದಿರುವುದಾಗಿ ಘೋಷಣೆ ಮಾಡುತ್ತಾರೆ. ಈ ವೇಳೆ ಪ್ರಯಾಣೀಕರು ಚಪ್ಪಾಳೆ ತಟ್ಟಿ ಸಂಭ್ರಮಿಸುತ್ತಿದ್ದರೆ ವ್ಯಕ್ತಿಯೋರ್ವ ಮಧ್ಯದ ಬೆರಳು ತೋರಿಸಿ ವಿಕೃತಿ ಮರೆಯುತ್ತಾನೆ. ಈ ವಿಡಿಯೋ ವೈರಲ್​ ಆಗಿದ್ದು ಹಲವರು ಖಂಡಿಸಿದ್ದಾರೆ.
ಹಲವರು ವ್ಯಕ್ತಿಯ ಬೆರಳನ್ನು ಕಡಿದು ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಆದರೆ ಯಾವ ವಿಮಾನದಲ್ಲಿ ಮತ್ತು ಆತ ಎಲ್ಲಿಗೆ ಪ್ರಯಾಣಿಸುತ್ತಿದ್ದ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 4 =
Remember me
