ಲಖನೌ:ಪ್ರೀತಿ-ಪ್ರೇಮದ ಹೆಸರಿನಲ್ಲಿ ತನ್ನನ್ನು ವಂಚಿಸುತ್ತಿದ್ದಾಳೆ ಎಂದು ಆರೋಪಿಸಿ ಯುವಕನೋರ್ವ ತನ್ನ ಪ್ರೇಯಸಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಲಖೀಂಪುರ್​ ಖೇರಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ಯುವಕ ಇಶು ವರ್ಮಾ ಎಂಬಾತನನ್ನು ವಶಕ್ಕೆ ಪಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕ ಬೆಲ್ಟ್​ನಿಂದ ಯುವತಿಯನ್ನು ಮನಬಂದಂತೆ ಥಳಿಸುತ್ತಿರುವುದು ಕಂಡು ಬರುತ್ತದೆ. ಬಳಿಕ ಆಕೆಯ ಕಪಾಳಕ್ಕೆ ಬಾರಿಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.
Up. लखीमपुर में लड़का लड़की को बेल्ट से मारता है लड़की बेल्ट छीन लेती है तो थप्पड़ों से मारता है, मारता ही रहता है…लड़की सिर्फ एक बात रटती है कि मेरा मोबाइल दे दो, मामला प्रेम प्रसंग का है लड़के को शक है कि लड़की का कहीं अफेयर चल रहा है इसलिए वह लड़की का मोबाइल छीन लेता है..pic.twitter.com/4TI6gnG8Dd
ಇದನ್ನೂ ಓದಿ:ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ ಆಧಾರ್​ ಕಾರ್ಡ್​ ತಿರುಚಿದ ಆರೋಪ; ಯುವಕ ಅರೆಸ್ಟ್​
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಚಂದ್ರಶೇಖರ್​ ಪ್ರೀತಿ-ಪ್ರೇಮದ ಹೆಸರಿನಲ್ಲಿ ತನ್ನ ಪ್ರಿಯತಮೆ ವಂಚಿಸುತ್ತಿದ್ದಾಳೆ ಎಂದು ಊಹಿಸಿ ಇಶು ವರ್ಮಾ ಎಂಬಾತ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿರುವುದನ್ನು ಆತನ ಸ್ನೇಹಿತ ಮೊಬೈಲ್​ ಫೋನಿನಲ್ಲಿ ಸೆರೆ ಹಿಡಿದಿದ್ದಾನೆ.
ಪ್ರಕರಣ ಸಂಬಂಧ ಆರೋಪಿ ಇಶು ವರ್ಮಾ ಹಾಗೂ ವಿಡಿಯೋವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಿದ ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಗಾಯಾಳು ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ಚಂದ್ರಶೇಖರ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
