ಲಖನೌ:ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ವ್ಯಕ್ತಿಯೋರ್ವ ಆಕೆಯ ಶಿರಚ್ಛೇದ ಮಾಡಿರುವ ಘಟನೆ ಉತ್ತರಪ್ರದೇಶದ ಬಾರಾಬಂಕಿಯ ಫತೇಪುರ್ ಕೊಟ್ವಾಲಿ ಪ್ರದೇಶದ ಬಸಾರಾ ಗ್ರಾಮದಲ್ಲಿ ನಡೆದಿದೆ.
ಆರೋಪಿ ತನ್ನ ಹೆಂಡತಿಯ ತಲೆ ಹಿಡಿದು ರಸ್ತೆಯಲ್ಲಿ ಒಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
🚨संवेदनशील वीडियो🚨UP : जिला बाराबंकी में अनिल ने पत्नी वंदना की हत्या कर दी। कटी हुई गर्दन लेकर वो थाने पर पहुंच गया। वंदना का कहीं और अफेयर था। घर में लव लेटर देखकर अनिल ने ये वारदात की।pic.twitter.com/jsFP91mdzM
ಇದನ್ನೂ ಓದಿ:ರಾಜ್ಯ ಬಜೆಟ್​; 3 ಲಕ್ಷ ಮನೆಗಳ ನಿರ್ಮಾಣದ ಗುರಿ: ಸಿಎಂ ಸಿದ್ದರಾಮಯ್ಯ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಅನಿಲ್ ಕನೌಜಿಯ ರಾಜಗೀರ್ ಜೀವನೋಪಾಯಕ್ಕಾಗಿ ಕೂಲಿ ಕೆಲಸ ಮಾಡುತ್ತಿದ್ದು, ಎಂಟು ವರ್ಷಗಳ ಹಿಂದೆ ವಂದನಾಳನ್ನು (27) ಮದುವೆಯಾಗಿದ್ದ. ಇತ್ತೀಚಿಗೆ ವಂದನಾ ತಮ್ಮ ಸಂಬಂಧಿಕರ ಮದುವೆಯಲ್ಲಿ ಭಾಗಿಯಾಗಿದ್ದ ವೇಳೆ ಆಕೆ ಮತ್ತೊಬ್ಬ ವ್ಯಕ್ತಿಯ ಜೊತೆ ಮಾತನಾಡಿರುವುದನ್ನು ಪತಿ ಗಮನಿಸಿದ್ದಾನೆ.
ಇದರಿಂದ ಸಿಟ್ಟಿಗೆದ್ದ ಆರೋಪಿ ಶುಕ್ರವಾರ ಬೆಳಗ್ಗೆ 9:30ರ ಸುಮಾರಿಗೆ ಪತ್ನಿಯೊಂದಿಗೆ ಈ ವಿಚಾರವಾಗಿ ಗಲಾಟೆ ತೆಗೆದಿದ್ದು, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯ ತಲೆ ಕಡಿದ ಆರೋಪಿ ಬಳಿಕ ಅದನ್ನು ಹಿಡಿದುಕೊಂಡು ಗ್ರಾಮದ ರಸ್ತೆಯ ತುಂಬೆಲ್ಲಾ ಓಡಾಡಿದ್ದಾನೆ. ಇದನ್ನು ಗಮನಿಸಿದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
