ನವದೆಹಲಿ:ತಮ್ಮ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಯುವಕನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಜಫರಾಬಾದ್​ ಪ್ರದೇಶದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೃತ ಯುವಕನ್ನು ಸಲ್ಮಾನ್​(25) ಎಂದು ಗುರುತಿಸಲಾಗಿದೆ. ಯುವತಿಯ ತಂದೆ ಮನ್ಸೂರ್ ಆಕೆಯ ಇಬ್ಬರು ಚಿಕ್ಕಪ್ಪಂದಿರು ಹಾಗೂ ಓರ್ವ ಅಪ್ರಾಪ್ತ ವಯಸ್ಕ ಕೃತ್ಯವನ್ನು ಎಸಗಿ ಪರಾರಿಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಸಲ್ಮಾನ್​ ಹಾಗೂ ಯುವತಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ತಿಳಿದ ಯುವತಿಯ ಕುಟುಂಬಸ್ಥರು ಇದನ್ನು ಬಲವಾಗಿ ವಿರೋಧಿಸಿದ್ದರು.
दिल्ली का जाफराबाद थाना क्षेत्र जहां पर प्यार करने पर मिली मौत और भीड़ देखती रही तमाशासीसीटीवी आपका दिल दहला सकती हैदिल्ली में बदमाशो का ख़ौफ़ ख़त्म@DCPNEastDelhi@CPDelhi@DelhiPolice@LtGovDelhi@HMOIndia@PMOIndia@ArvindKejriwal@msisodia@BBCHindi@aajtakpic.twitter.com/4E6f5c0X32
ಇದನ್ನೂ ಓದಿ:ಪ್ರೀತಿಯ ವಿಚಾರಕ್ಕೆ ಯುವಕನನ್ನು ಸುಟ್ಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಕೊನೆಯುಸಿರು
ಮಂಗಳವಾರ ಸಂಜೆ 5:15ರ ಸುಮಾರಿಗೆ ಸಲ್ಮಾನ್​ ಜಫರಾಬಾದ್​ನ ಚೌಹಾಣ್​ ಬಂಗೇರದ ಬಳಿ ಇರುವ ಕಲ್ಯಾಣ್​ ಚಿತ್ರಮಂದಿರದ ರಸ್ತೆಯಲ್ಲಿ ಬರುತ್ತಿದ್ದಾನೆ ಎಂಬ ವಿಚಾರ ತಿಳಿದ ಯುವತಿಯ ಕುಟುಂಬಸ್ಥರು ಆತನನ್ನು ಅಡ್ಡಗಟ್ಟಿ ಎದೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಯುವತಿಯ ತಂದೆ ಮನ್ಸೂರ್​ ಆತನ ಇಬ್ಬರು ಸಹೋದರರು ಹಾಗೂ ಓರ್ವ ಅಪ್ರಾಪ್ತ ವಯಸ್ಕ ತಲೆಮಾರಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
