ಬಿಹಾರ:ಪತಿಯನ್ನು ಪತ್ನಿ ಮತ್ತು ಮಾಜಿ ಪತ್ನಿ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಬಿಹಾರದ ಛಾಪ್ರಾದಲ್ಲಿ ವರದಿಯಾಗಿದೆ.
ಹತ್ಯೆಗೀಡಾದ ವ್ಯಕ್ತಿ ಅಲಂಗೀರ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಬಿಹಾರಕ್ಕೆ ಹಿಂದಿರುಗಿದ್ದ ಅನ್ಸಾರಿ ತನ್ನ ಪತ್ನಿ ಅಮಿನಾ ಜತೆಗೆ ದೆಹಲಿಯಲ್ಲಿ ವಾಸವಿದ್ದನು. ಈ ವೇಳೆ ಮಾಜಿ ಪತ್ನಿ ಸಲ್ಮಾ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಒಂದೇ ನಗರದಲ್ಲಿ ಇದ್ದ ಅಲಂಗೀರ್, ಅಮೀನಾ ಮತ್ತು ಸಲ್ಮಾ ನಡುವೆ ಜಗಳ ಪ್ರಾರಂಭವಾಗಿ ತಾರಕಕ್ಕೇರಿದೆ. ಈ ವೇಳೆ ಆಕ್ರೋಶಗೊಂಡ ಇಬ್ಬರು ಮಹಿಳೆಯರು ತಮ್ಮ ಪತಿಗೆ ಚಾಕುವಿನಿಂದ ಇರಿದಿದ್ದಾರೆ.
ಇದನ್ನೂ ಓದಿ:VIDEO| ಪಂಚಾಯತ್​ ಚುನಾವಣೆ; ಮತ ಎಣಿಕೆಯ ದಿನವೂ ಭುಗಿಲೆದ್ದ ಹಿಂಸಾಚಾರ
ಕೂಡಲೇ ಸ್ಥಳೀಯರು ಅಲಂಗೀರ್​ನನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಎಂದು ಪಾಟ್ನಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಲಂಗೀರ್ ಮೃತಪಟ್ಟಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ, ವರದಿ ಪಡೆದ ನಂತರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಸದ್ಯ ಪೊಲೀಸರು ಇಬ್ಬರೂ ಮಹಿಳೆಯರನ್ನು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 2 =
Remember me
