ನವದೆಹಲಿ:ದಂಪತಿಗಳ ನಡುವಿನ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯ ದಕ್ಷಿಣ ಭಾಗದಲ್ಲಿರುವ ಕಿಶನ್​ಗಢ ಎಂಬ ಪ್ರದೇಶದಲ್ಲಿ ನಡೆದಿದೆ.
ಘಟನೆ ಶನಿವಾರ ಸಂಜೆ ನಡೆದಿದ್ದು, ಮೃತ ದುರ್ದೈವಿಯನ್ನು ರಾಬಿನ್​ ಶ್ರೇಷ್ಟಾ(25) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮಣಿಪುರ ಮೂಲದ ಮಿಂಗ್​ಚಾಂಗ್​ ಅಲಿಯಾಸ್​ ಜಿಮ್ಮಿ(26) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತನ್ನ ಮನೆಯಲ್ಲಿ ಎಸಿ ಇಲ್ಲದ ಕಾರಣ ಆರೋಪಿ ಜಿಮ್ಮಿ ಹೆಂಡತಿ ಹಾಗೂ ಮಗನ ಜೊತೆಗೆ ರಾಬಿನ್​ ಮನೆಯಲ್ಲಿ ವಾಸವಿದ್ದ. ಶನಿವಾರ ರಾಬಿನ್​ನ ಮನೆಯಲ್ಲಿ ಆರೋಪಿ ಮಧ್ಯ ಸೇವಿಸಿದ್ದು, ತನ್ನ ಹೆಂಡತಿ ಜೊತೆ ಜಗಳವಾಡಲು ಶುರು ಮಾಡಿದ್ದಾನೆ.
ಇದನ್ನೂ ಓದಿ:ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್​ ರಾಜ್​
ಇದನ್ನು ಗಮನಿಸಿದ ರಾಬಿನ್​ ಹಾಗೂ ಆತನ ಗೆಳತಿ ದಂಪತಿಗಳ ನಡುವಿನ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ. ಪಾನಮತ್ತನಾಗಿದ್ದ ಆರೋಪಿ ಜಿಮ್ಮಿ ಇದು ತನ್ನ ದಾಂಪತ್ಯದ ವಿಚಾರವಾಗಿದ್ದು, ಇದರಲ್ಲಿ ತಲೆ ಹಾಕದಂತೆ ಎಚ್ಚರಿಸಿದ್ದಾನೆ. ಈ ವೇಳೆ ರಾಬಿನ್​ ಹಾಗೂ ಜಿಮ್ಮಿ ನಡುವಿನ ಜಗಳ ತಾರಕಕ್ಕೇರಿದ್ದು, ಆರೋಪಿ ಜಿಮ್ಮಿ ರಾಬಿನ್​ ಎದೆಗೆ ಚಾಕುವಿನಿಂದ ಇರಿದಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ರಾಬಿನ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿ ಜಿಮ್ಮಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 302ರ ಅಡಿಯಲ್ಲಿ ಪ್ರಕರಣ ದಾಖಲಿಸಕೊಳ್ಳಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 15 =
Remember me
