ಮುಂಬೈ:500 ರೂಪಾಯಿ ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ತನ್ನ ಸಹೋದ್ಯೋಗಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಘಟನೆ ಆಗಸ್ಟ್​ 8ರಂದು ನಡೆದಿದ್ದು, ಗುಜರಿ ವ್ಯಾಪಾರಿ ವಿಕ್ಕಿ ಚಿಂದಾಲಿಯಾ(27) ಅವರ ಮೃತದೇಹವು ಪನ್ವೇಲ್​ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಆರೋಪಿ ಸಚಿನ್​ ಶಿಂಧೆ(30)ನನ್ನು ಬಂಧಿಸಿ ವಿಚಾರಾಣೆಗೆ ಒಳಪಡಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪನ್ವೇಲ್​ ನಗರ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಅಂಜುಮ್​ ಭಗವಾನ್​ ವಿಕ್ಕಿ ಚಿಂದಾಲಿಯಾ ಹಾಗೂ ಆರೋಪಿ ಸಚಿನ್​ ಶಿಂಧೆ ಇಬ್ಬರು ಸಹೋದ್ಯೋಗಿಗಳಾಗಿದ್ದು, ಗುಜರಿ ವ್ಯಾಪಾರವನ್ನು ನೋಡಿಕೊಳ್ಳುತ್ತಿದ್ದರು. ಆಗಸ್ಟ್​ 8ರಂದು ಮದ್ಯ ಸೇವಿಸುವ ವೇಳೆ ಇಬ್ಬರ ನಡುವೆ 500 ರೂಪಾಯಿ ಕೊಡಲಿಲ್ಲ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿದ್ದು ಆರೋಪಿ ಸಚಿನ್​ ಕುಡಿದ ಮತ್ತಿನಲ್ಲಿ ವಿಕ್ಕಿಯನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಬಿಬಿಎಂಪಿ ಅಗ್ನಿ ಅವಘಡ; ತನಿಖಾ ವರದಿ ಕೈಸೇರುವವರೆಗೂ ಅಂತಿಮ ನಿರ್ಧಾರ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್​
ಪನ್ವೇಲ್​ ರೈಲ್ವೆ ನಿಲ್ದಾಣದ ಬಳಿ ಮೃತದೇಹ ಒಂದು ರಸ್ತೆ ಬದಿ ಬಿದ್ದಿರುವ ಕುರಿತು ಸ್ಥಳೀಯರೊಬ್ಬರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಸ್ಥಳದಲ್ಲಿ ಸಿಕ್ಕ ವಸ್ತು ಹಾಗೂ ಪ್ರದೇಶದ ಸುತ್ತ ಇರುವ ಸಿಸಿಟಿವಿ ದೃಶ್ಯಗಳನ್ನೂ ಪರಿಶೀಲಿಸಿ ಆರೋಪಿಯನ್ನು ಔರಂಗಬಾದ್​ ಜಿಲ್ಲೆಯ ಗ್ರಾಮ ಒಂದರಲ್ಲಿ ಬಂಧಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಮೃತ ವಿಕ್ಕಿ ತನಗೆ 500 ರೂಪಾಯಿ ಹಣ ಕೊಡಬೇಕಾಗಿತ್ತು. ಆಗಸ್ಟ್​ 8ರಂದು ಇಬ್ಬರ ನಡುವೆ ಇದೇ ವಿಚಾರವಾಗಿ ಗಲಾಟೆ ನಡೆದಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಚಾರ್ಜ್​ಶೀಟ್​ ಸಿದ್ದಪಡಿಸಿ ಶೀಘ್ರದಲ್ಲೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪನ್ವೇಲ್​ ನಗರ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಅಂಜುಮ್​ ಭಗವಾನ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
