ರಾಂಚಿ:ಆಘಾತಕಾರಿ ಘಟನೆಯೊಂದರಲ್ಲಿ 10 ರೂ. ಕೇಳಿದ ಎಂಬ ಕಾರಣಕ್ಕೆ ತಂದೆಯೇ ತನ್ನ ಮಗನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನ ಚತ್ರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯು ಬಶಿಷ್ಟನಗರ ಪೊಲೀಸ್​ ಠಾಣೆ ವ್ಯಾಪ್ತಿಯ ಕರೈಲಿಬಾರ್​ ಪ್ರದೇಶದಲ್ಲಿ ನಡೆದಿದ್ದು, ಮೃತ ದುರ್ದೈವಿಯನ್ನು ಪಪ್ಪು ಕುಮಾರ್​(12), ಬಂಧಿತ ಆರೋಪಿಯನ್ನು ಬಿಲೇಶ್​ ಭೂಯಾನ್​(48) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಾರು-ಲಾರಿ ಅಪಘಾತ; ಮೂರು ತಿಂಗಳ ಶಿಶು ಸೇರಿ ಮೂವರ ಮೃತ್ಯು
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಶಿಷ್ಟನಗರ ಪೊಲೀಸ್​ ಠಾಣಾಧಿಕಾರಿ ಗುಲಾಂ ಸರ್ವಾರ್​ ಘಟನೆಯೂ ಬೆಳಗ್ಗೆ 9 ಘಂಟೆ ಸುಮಾರಿಗೆ ನಡೆದಿದ್ದು, ಕುಡಿದ ಮತ್ತಿನಲ್ಲಿ ಬಾಲಕನ ಪೋಷಕರಿಬ್ಬರು ಜಗಳವಾಡುತ್ತಿದ್ದರು. ಈ ವೇಳೆ ಪಪ್ಪು ಕುಮಾರ್​ ತನ್ನ ತಂದೆಯ ಬಳಿ 10 ರೂ. ಕೇಳಿದ್ದಾನೆ. ಇದರಿಂದ ಸಿಟ್ಟಿಗೆದ್ದ ಆರೋಪಿಯೂ ತನ್ನ ಮಗನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಮೃತ ಬಾಲಕನ ಸಹೋದರಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮನೆಗ ವಾಪಸ್​ ಆದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಆಕೆ ಅಲಾರಾಮ್​ ಹೊಡೆದು ವಿಚಾರವನ್ನು ನೆರೆ ಹೊರೆಯವರಿಗೆ ತಿಳಿಸಿದ್ದಾಳೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಬಶಿಷ್ಟನಗರ ಪೊಲೀಸ್​ ಠಾಣಾಧಿಕಾರಿ ಗುಲಾಂ ಸರ್ವಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − nine =
Remember me
