ಜೈಪುರ:ಯುವಕ-ಯುವತಿಯ ಸಂಬಂಧದ ವಿಚಾರಕ್ಕೆ ನಾನಾ ರೀತಿಯ ಗಲಾಟೆಗಳು ಆಗುತ್ತವೆ. ಅಂಥದ್ದೇ ಒಂದು ಗಲಾಟೆಯಲ್ಲಿ ಯುವಕನೊಬ್ಬನನ್ನು ಬೆತ್ತಲಾಗಿಸಿದ್ದಲ್ಲದೆ, ಆತನಿಗೆ ಥಳಿಸಿ, ತಲೆ ಬೋಳಿಸಿ, ಅವನ ಬೈಕ್​ಗೆ ಬೆಂಕಿ ಇಟ್ಟ ಪ್ರಕರಣ ನಡೆದಿದೆ.
ಮುಕ್ತಿಯಾರ್ ಖಾನ್ ಎಂಬ 25 ವರ್ಷದ ಯುವಕ, ಯುವತಿಯೊಬ್ಬಳನ್ನು ಭೇಟಿಯಾಗಲು ಬಂದು ಇಂಥದ್ದೊಂದು ಫಜೀತಿಗೆ ಒಳಗಾಗಿದ್ದಾನೆ. ಮಾತ್ರವಲ್ಲ, ಈ ಪ್ರಕರಣದ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಆತ ದೂರು ನೀಡದಿದ್ದರೂ ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಮೋಹನ್​ಘರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದು ಮೂರು ದಿನಗಳ ಹಿಂದೆ ನಡೆದಿದ್ದು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಕ್ತಿಯಾರ್ ಖಾನ್ ತನ್ನದೇ ಸಮುದಾಯಕ್ಕೆ ಸೇರಿದ ಯುವತಿಯೊಬ್ಬಳನ್ನು ಆಗಾಗ ಭೇಟಿಯಾಗುತ್ತಿದ್ದ. ಈ ವಿಷಯ ಗೊತ್ತಿದ್ದ ಕೆಲವರು ಕಾದು ಆತನನ್ನು ಹಿಡಿದು ಥಳಿಸಿ, ಬೆತ್ತಲಾಗಿಸಿ, ತಲೆ ಬೋಳಿಸಿ, ಅವನ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ. ಆದರೆ ಇಷ್ಟಕ್ಕೆಲ್ಲ ಕಾರಣ ಏನು ಎಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಬರ್ತ್​​ಡೇಗೆ ಕೇಕು-ಹೂಗುಚ್ಛ ಬೇಡ, 18 ಪದಗಳೇ ಸಾಕು: ಅಭಿಮಾನಿಗಳಲ್ಲಿ ವಿಶಿಷ್ಟ ಬೇಡಿಕೆ ಇಟ್ಟ ಉಪೇಂದ್ರ!

ಸ್ಮಶಾನ ಇಲ್ಲದ್ದಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಸಂಸ್ಕಾರಕ್ಕೆ ಸಿದ್ಧತೆ; ಕೊನೇಲಿ ಆಗಿದ್ದೇ ಬೇರೆ..

ಕಾರು ಅಪಘಾತಕ್ಕೆ ದಂಪತಿ ಬಲಿ; ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಮಗನೂ ಇಂದು ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 14 =
Remember me
