ಕೊಲ್ಲಂ:ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಒಂದೂವರೆ ವರ್ಷದ ಮಗಳನ್ನು ಮನೆಯಿಂದ ಹೊರಗಡೆ ಎಸೆದಿರುವ ದಾರುಣ ಘಟನೆ ಕೇರಳದ ಕೊಲ್ಲಂನ ಕುರವನ್‌ಪಾಲಂನಲ್ಲಿ ನಡೆದಿದೆ.ಇದನ್ನೂ ಓದಿ:VIDEO| ಶಾಲಾ ಕಟ್ಟಡದಲ್ಲಿ ಸಿಲುಕಿದ್ದ 730 ವಿದ್ಯಾರ್ಥಿನಿಯರ ರಕ್ಷಣೆ
ಘಟನೆಗೆ ಸಂಬಂಧಿಸಿದಂತೆ ಮಗುವಿನ ಪೋಷಕರಾದ ತಮಿಳುನಾಡು ಮೂಲದ ಮುರುಕನ್ (35) ಮತ್ತು ಮರಿಯಮ್ಮ (23) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಗುವಿನ ತಲೆಗೆ ಗಾಯವಾಗಿದೆ. ಭಾನುವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಮ್ಮ ಬಾಡಿಗೆ ಮನೆಯಲ್ಲಿ ಮದ್ಯಪಾನ ಮಾಡುತ್ತಿದ್ದ ದಂಪತಿಗಳು ಭಾನುವಾರ ರಾತ್ರಿ ಜಗಳವಾಡಿದ್ದಾರೆ. ಅಷ್ಟರಲ್ಲಿ ಅವರ ಮಗಳು ಅವರತ್ತ ಬಂದಿದ್ದು, ಈ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ತಂದೆ ಸಿಟ್ಟಿಗೆದ್ದು ಹೊರಕ್ಕೆ ಎಸೆದಿದ್ದಾನೆ. ಪೋಷಕರ ನಡುವೆ ನಡೆದ ಜಗಳದಲ್ಲಿ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಮಗುವನ್ನು ತಿರುವನಂತಪುರದ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ:ಮದುವೆ ಮುಗಿಸಿ ಮನೆಗೆ ಹೊರಟ ಅತಿಥಿಗಳು ಮಸಣ ಸೇರಿದ್ರು…
ಮಗು ನೆಲಕ್ಕೆ ಎಸೆದ ನಂತರ ಗಾಯಗೊಂಡಿದೆಯೇ ಅಥವಾ ಆಕಸ್ಮಿಕವಾಗಿ ಬಿದ್ದಿದೆಯೇ ಎಂದು ಖಚಿತಪಡಿಸಿಕೊಳ್ಳಲು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
